ಬೆಂಗಳೂರು: ಒಂದರಿಂದ ಎಂಟನೇ ತರಗತಿವರೆಗಿನ ಶಾಲಾ ಶಿಕ್ಷಕರ ನೇಮಕಾತಿಗೆ ಅರ್ಹತೆ ಪಡೆಯಲು ಅಗತ್ಯವಾದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (ಟಿಇಟಿ-2021) ಆಗಸ್ಟ್ 22ರಂದು ನಡೆಯಲಿದೆ.

ಒಂದರಿಂದ ಐದನೇ ತರಗತಿವರೆಗೆ ಶಿಕ್ಷಕರಾಗಲು ಟಿಇಟಿಗೆ ಅರ್ಜಿ ಸಲ್ಲಿಸುವವರು ಪಿಯುಸಿ ಹಾಗೂ ಡಿ.ಇಡಿ. ಉತ್ತೀರ್ಣರಾಗಿರಬೇಕು. ಆರರಿಂದ ಎಂಟನೇ ತರಗತಿವರೆಗೆ ಶಿಕ್ಷಕರಾಗಲು ಅರ್ಜಿ ಸಲ್ಲಿಸುವವರು ಪದವಿ ಮತ್ತು ಡಿ.ಇಡಿ ಅಥವಾ ಪದವಿಯೊಂದಿಗೆ ಬಿ.ಇಡಿ ಅಥವಾ ಬಿ.ಎ.ಇಡಿ, ಬಿ.ಎಸ್‌ಸಿ.ಇಡಿ ಯಲ್ಲಿ ಉತ್ತೀರ್ಣರಾಗಿರಬೇಕು. ಅಂತಿಮ ವರ್ಷ ಡಿ.ಇಡಿ, ಬಿ.ಇಡಿ, ಬಿ.ಎ.ಇಡಿ, ಬಿಎಸ್ಸಿ.ಇಡಿ ಪರೀಕ್ಷೆಗೆ ಹಾಜರಾಗಿ, ಫಲಿತಾಂಶ ನಿರೀಕ್ಷೆಯಲ್ಲಿರುವವರೂ ಅರ್ಜಿ ಸಲ್ಲಿಸಬಹುದು.

ಅರ್ಹ ಅಭ್ಯರ್ಥಿಗಳು ಇಲಾಖೆಯ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಇದೇ 20 ಕೊನೆ ದಿನ. ಆ. 22ರಂದು ಬೆಳಿಗ್ಗೆ 9.30ರಿಂದ 12 ಗಂಟೆವರೆಗೆ ಮತ್ತು ಮಧ್ಯಾಹ್ನ 2 ಗಂಟೆಯಿಂದ 4.30ರವರೆಗೆ ಪರೀಕ್ಷೆಗಳು ನಡೆಯಲಿವೆ. ಪತ್ರಿಕೆ 150 ಅಂಕಗಳನ್ನು ಹೊಂದಿರುತ್ತವೆ. ಪ್ರವೇಶಪತ್ರಗಳನ್ನು ಆ. 12ರಿಂದ ಆನ್‌ಲೈನ್‌ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದು.

‘ಶಿಕ್ಷಕರ ಅರ್ಹತಾ ಪರೀಕ್ಷೆಯ ಪ್ರಮಾಣ ಪತ್ರ ಜೀವಿತಾವಧಿಯವರೆಗೆ ಮಾನ್ಯತೆ ಹೊಂದಿರುತ್ತದೆ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.