ಬೆಂಗಳೂರು: ‘ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪಿಎಚ್.ಡಿ ಅಧ್ಯಯನಕ್ಕೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಂಶೋಧನಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ‘ಪ್ರಬುದ್ಧ’ ಯೋಜನೆಯಡಿ ನೀಡಲಾಗುತ್ತಿದ್ದ ಸಹಾಯಧನ ಮುಂದುವರಿಸಲಿದೆ’ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಹೇಳಿದ್ದಾರೆ.

‘ಪ್ರಬುದ್ಧ’ ಯೋಜನೆಯನ್ನು 2023-24ನೇ ಸಾಲಿನಿಂದ ಕೈಬಿಟ್ಟಿರುವ ಕುರಿತು ‘ಪ್ರಜಾವಾಣಿ’ಯ ಶನಿವಾರದ ಸಂಚಿಕೆಯಲ್ಲಿ ಸುದ್ದಿ ಪ್ರಕಟವಾಗಿತ್ತು.

ಈ ಕುರಿತು ತಮ್ಮ ‘X’ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಮಹದೇವಪ್ಪ, ‘ಪ್ರಬುದ್ಧ’ ಯೋಜನೆಯಡಿ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ವಿದೇಶದಲ್ಲಿ ಪಿಎಚ್. ಡಿ ಅಧ್ಯಯನಕ್ಕೆ ಸಂಬಂಧಿಸಿದಂತೆ ಕೆಲವು ಗೊಂದಲಗಳು ಉಂಟಾಗಿದೆ. ಈ ಯೋಜನೆ ಹಿಂದಿನ ರೀತಿಯಲ್ಲೇ ಮುಂದುವರಿಯಲಿದೆ. ಈ ಕುರಿತು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ’ ಎಂದಿದ್ದಾರೆ.

‘ಪರಿಶಿಷ್ಟ ಸಮುದಾಯದ ಜನರು ವಿದೇಶಗಳಲ್ಲಿ ಉನ್ನತ ವ್ಯಾಸಂಗ ಮಾಡಿದಾಗ ಮಾತ್ರ ಅವರು ಘನತೆಯುತ ಸ್ಥಾನಗಳಿಗೆ ಏರಲು ಸಾಧ್ಯ ಎಂಬ ಬಾಬಾ ಸಾಹೇಬರ ಆಶಯಗಳನ್ನು ಸಾಕಾರಗೊಳಿಸುವುದು ನಮ್ಮ ಜವಾಬ್ದಾರಿಯೇ ಆಗಿದೆ. ಈ ಹಿನ್ನಲೆಯಲ್ಲಿ, ಈ ಹಿಂದಿನಂತೆಯೇ ವಿಶ್ವದ ಅಗ್ರ 100 ವಿಶ್ವವಿದ್ಯಾಲಯಗಳಲ್ಲಿ ಪಿಎಚ್. ಡಿ ವ್ಯಾಸಂಗಕ್ಕೆ ಆಯ್ಕೆಯಾಗುವ ಪರಿಶಿಷ್ಟ ವಿದ್ಯಾರ್ಥಿಗಳಿಗೆ ಈ ಯೋಜನೆಯ ಅನುಕೂಲ ಸಿಗಲಿದೆ’ ಎಂದೂ ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.