ಬೆಂಗಳೂರು: ಇದೇ ಜುಲೈ ಒಳಗೆ ಅವಧಿ ಮುಕ್ತಾಯವಾಗುವ ನಾಲ್ಕು ಗ್ರಾಮ ಪಂಚಾಯಿತಿಗಳ 105 ಸ್ಥಾನಗಳು ಮತ್ತು ರಾಜ್ಯದ ಹಲವು ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಗೆ ತೆರವಾಗಿರುವ 209 ಸದಸ್ಯ ಸ್ಥಾನಗಳಿಗೆ ಮೇ 20 ರಂದು ಚುನಾವಣೆ ನಡೆಯಲಿದ್ದು, ಈ ಸಂಬಂಧ ಅಧಿಸೂಚನೆ ಹೊರಡಿಸಲಾಗಿದೆ.

ಧಾರವಾಡ ಜಿಲ್ಲೆಯ ಚಾಕಲಬ್ಬಿ, ಬೆಂಗಳೂರು ನಗರ ಜಿಲ್ಲೆಯ ಕಗ್ಗಲೀಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತ್ಯಾಮಗೊಂಡ್ಲು, ಬಾಗಲಕೋಟೆ ಜಿಲ್ಲೆ ಸಾವಳಗಿ ಗ್ರಾಮ ಪಂಚಾಯಿತಿಗಳ 105 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಅಲ್ಲದೆ, ತುಮಕೂರು ಜಿಲ್ಲೆ ಶಿರಾ ನಗರಸಭೆಯ 21 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ದಾವಣಗೆರೆ ಮಹಾನಗರಪಾಲಿಕೆಯ 2 ಚನ್ನಗಿರಿ ಪುರಸಭೆಯ 1,ಆನೆಕಲ್ ಪುರಸಭೆಯ 3, ಹೊಳೆನರಸೀಪುರ, ಜೇವರ್ಗಿ ಮತ್ತು ಸಂಕೇಶ್ವರ ಪುರಸಭೆಯ ತಲಾ 1 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಮತ್ತು ಅನುದಾನ ರಹಿತ ವಿದ್ಯಾಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರೆ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕಾ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವ ಕಾಯಂ ಅಥವಾ ದಿನಗೂಲಿ ಮೇಲೆ ಕರ್ತವ್ಯ ನಿರ್ವಹಿಸುವ ಅರ್ಹ ಮತದಾರ ನೌಕರರಿಗೆ ಮೇ 20 ರಂದು ಮತದಾನ ಮಾಡಲು ರಜೆ ನೀಡಬೇಕು ಎಂದು ಸರ್ಕಾರದ ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ವೀರಭದ್ರ ಹಂಚಿನಾಳ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.