ರಾಜ್ಯದಲ್ಲಿ ಆನೆಗಳ ಸಂತತಿ ಹೆಚ್ಚಳ
ವಿಚಾರಣೆ ವೇಳೆ ಪ್ರಕರಣದ ಅಮಿಕಸ್ ಕ್ಯೂರಿ ಹೈಕೋರ್ಟ್‌ನ ಹಿರಿಯ ವಕೀಲ ರಮೇಶ್ ಪುತ್ತಿಗೆ ಅವರು, ‘ದೇಶದಲ್ಲಿ 2023ರಲ್ಲಿ ನಡೆದ ಆನೆ ಗಣತಿ ಪ್ರಕಾರ 27 ಸಾವಿರ ಆನೆಗಳಿವೆ. ಇವುಗಳಲ್ಲಿ ಕರ್ನಾಟಕದಲ್ಲೇ 7 ಸಾವಿರದಷ್ಟಿವೆ. ರಾಜ್ಯದಲ್ಲಿ ಆನೆ ಸಂತತಿ ಹೆಚ್ಚಾಗಿದ್ದು, ಗಂಡಾನೆ ಮತ್ತು ಹೆಣ್ಣಾನೆಗಳು ಸಮಾನ ಸಂಖ್ಯೆಯಲ್ಲಿವೆ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
‘ವಯಸ್ಕ ಆನೆಗಳ ಸರಾಸರಿಯಲ್ಲಿ ಸಾಕಷ್ಟು ವ್ಯತ್ಯಾಸವಿದ್ದು, ಗಂಡಾನೆಗಳಿಗಿಂತಲೂ ಹೆಣ್ಣಾನೆಗಳ ಪ್ರಮಾಣ ಶೇ 50ರಷ್ಟು ಕಡಿಮೆ ಇದೆ. ಗಂಡಾನೆಗಳನ್ನು ಕೊಂದು; ದಂತ ಮತ್ತು ಮೂಳೆಗಳನ್ನು ಅಕ್ರಮ ವ್ಯಾಪಾರಕ್ಕೆ ಬಳಕೆ ಮಾಡಲಾಗುತ್ತಿದೆ’ ಎಂದರು.
‘ಅಶ್ವತ್ಥಾಮ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ ಎಂದು ಹೇಳಲಾಗಿತ್ತು. ಆದರೆ, ಮರಣೋತ್ತರ ಪರೀಕ್ಷೆಯಲ್ಲಿ ಸೋಲಾರ್ ತಂತಿ ತಗುಲಿ ಸಾವಿಗೀಡಾಗಿದೆ ಎಂಬುದು ಗೊತ್ತಾಗಿದೆ. ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಸೋಲಾರ್ ವಿದ್ಯುತ್ ತಡೆಗೋಡೆ ಹಾಕವುದಕ್ಕೂ ನಿರ್ಬಂಧವಿದೆ’ ಎಂದು ವಿವರಿಸಿದರು.