ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿಯ ದಬ್ಬಳಿಕಟ್ಟೆ ಅರಣ್ಯದಲ್ಲಿ ಕಾಡಾನೆ ದಾಳಿಯಿಂದ ಮೃತಪಟ್ಟ ‘ಅರ್ಜುನ’.
‘ನಮ್ಮನ್ನೆಲ್ಲಾ ಕಾಪಾಡಿ ಮೃತಪಟ್ಟಿತು’
ಅರ್ಜುನನ ಸಾವು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಮಾವುತರಿಗೆ ತೀವ್ರ ನೋವು ಉಂಟು ಮಾಡಿತ್ತು. ‘ನಮ್ಮನ್ನೆಲ್ಲ ಕಾಪಾಡಿ ಅರ್ಜುನ ಮೃತಪಟ್ಟಿತು’ ಎಂದು ಅವರು ದುಃಖ ತೋಡಿಕೊಳ್ಳುತ್ತಿದ್ದ ದೃಶ್ಯ ಮನಕಲಕುವಂತಿತ್ತು. ಕುಸಿದು ಬಿದ್ದ ಮಾವುತ: ಅರ್ಜುನನ ಸಾವಿನ ಆಘಾತವನ್ನು ತಡೆಯದೇ ಮಾವುತ ವಿನು ಕುಸಿದು ಬಿದ್ದರು. ಕೂಡಲೇ ಅವರಿಗೆ ನೀರು ಕುಡಿಸಿ ಉಪಚರಿಸಿದ ಸಿಬ್ಬಂದಿ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕಳುಹಿಸಿದರು.
ಅರ್ಜುನನಿಗೆ ಅರಿವಳಿಕೆ ಚುಚ್ಚುಮದ್ದು ತಾಕಿತ್ತೇ?
‘ಕಾಡಾನೆಗೆ ನೀಡಬೇಕಿದ್ದ ಅರಿವಳಿಕೆ ಚುಚ್ಚುಮದ್ದು ಅರ್ಜುನನಿಗೆ ತಗುಲಿದ್ದರಿಂದ ಅದು ಕಾಡಾನೆ ಜೊತೆಗೆ ಸೆಣೆಸಲು ಸಾಧ್ಯವಾಗಲಿಲ್ಲ’ ಎನ್ನುವ ಆರೋಪವೂ ಕೇಳಿಬಂದಿದೆ. ಇದಕ್ಕೆ ಸ್ಪಷ್ಟನೆ ನೀಡಿರುವ ಎಸಿಎಫ್ ಮಹಾದೇವ ‘ಆನೆಯ ಕಳೇಬರವನ್ನು ಸ್ಥಳಾಂತರಿಸಿದ ನಂತರ ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ಅದರಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ. ಅರಣ್ಯ ಇಲಾಖೆಯಿಂದ ಯಾವುದೇ ನಿರ್ಲಕ್ಷ್ಯವಾಗಿಲ್ಲ’ ಎಂದು ಹೇಳಿದರು.