ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಾಲಾ ಮಕ್ಕಳಿಗೆ ಕಳಪೆ ಸಮವಸ್ತ್ರ: ತನಿಖೆಗೆ ನಿರ್ಧಾರ

Published : 7 ಸೆಪ್ಟೆಂಬರ್ 2023, 16:15 IST
Last Updated : 7 ಸೆಪ್ಟೆಂಬರ್ 2023, 16:15 IST
ಫಾಲೋ ಮಾಡಿ
Comments
5 ನೇ ಹಣಕಾಸು ಆಯೋಗ ರಚನೆ
ಐದನೇ ಹಣಕಾಸು ಆಯೋಗ ರಚಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಇದಕ್ಕೆ ಅಧ್ಯಕ್ಷ ಮತ್ತು ಇಬ್ಬರು ಸದಸ್ಯರನ್ನು ನೇಮಿಸಲು ಮುಖ್ಯಮಂತ್ರಿಯವರಿಗೆ ಅಧಿಕಾರವನ್ನು ನೀಡಲಾಯಿತು ಎಂದು ಸಚಿವ ಎಚ್‌.ಕೆ.ಪಾಟೀಲ ತಿಳಿಸಿದರು. ಅಲ್ಲದೇ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಇಬ್ಬರು ಅಧಿಕಾರಿ ವರ್ಗದ ಸದಸ್ಯರ ನೇಮಕಾತಿ ಮಾಡುವ ಅಧಿಕಾರವನ್ನು ಮುಖ್ಯಮಂತ್ರಿಯವರಿಗೆ ನೀಡಲಾಗಿದೆ. ಈ ನೇಮಕವನ್ನು ಹೈಕೋರ್ಟ್‌ ಮತ್ತು ಸುಪ್ರೀಂಕೋರ್ಟ್‌ ನಿರ್ದೇಶನದ ಅನ್ವಯ ತೀರ್ಮಾನಿಸಲಾಗಿದೆ.
ಶಕ್ತಿ ಸ್ಮಾರ್ಟ್‌ ಕಾರ್ಡ್‌ಗೆ ಸೇವಾ ಶುಲ್ಕ
ಶಕ್ತಿ ಯೋಜನೆಯ ಸ್ಮಾರ್ಟ್‌ ಕಾರ್ಡ್‌ ವಿತರಿಸಲು ಇದ್ದ 3 ತಿಂಗಳ ಕಾಲಮಿತಿಯನ್ನು ಇನ್ನೂ 6 ತಿಂಗಳವರೆಗೆ ವಿಸ್ತರಿಸಲಾಗಿದೆ. ಅಲ್ಲದೇ ಕಾರ್ಡ್‌ ಒದಗಿಸಲು ₹14.16 ಸೇವಾ ಶುಲ್ಕ ನಿಗದಿಪಡಿಸಲು ತೀರ್ಮಾನಿಸಲಾಗಿದೆ ಎಂದು ಸಚಿವ ಎಚ್‌.ಕೆ.ಪಾಟೀಲ ತಿಳಿಸಿದರು. ಸ್ಮಾರ್ಟ್‌ ಕಾರ್ಡ್‌ಗಳನ್ನು ಗ್ರಾಮ ಒನ್‌ ಬೆಂಗಳೂರು ಒನ್‌ ಕರ್ನಾಟಕ ಒನ್‌ ಸೇವಾ ಕೇಂದ್ರಗಳ ಮೂಲಕ ಫಲಾನುಭವಿಗಳಿಗೆ ಅರ್ಜಿ ಸಲ್ಲಿಸಲು ಪ್ರತಿ ಅರ್ಜಿ ₹10 ಪ್ರತಿ ಮಂಜೂರಾತಿ ಮುದ್ರಿಸಲು ₹2 ರಂತೆ ಒಟ್ಟು ₹12 ಆಗಲಿದ್ದು ಇದಕ್ಕೆ ಜಿಎಸ್‌ಟಿ ಸೇರಿ ಒಟ್ಟು ₹14.16 ಸೇವಾ ಶುಲ್ಕ ವಿಧಿಸಲಾಗುವುದು. ಈ ಮೊತ್ತವನ್ನು ಫಲಾನುಭವಿಗಳೇ ಭರಿಸಬೇಕು ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT