ಬೆಂಗಳೂರು: ಪಶ್ಚಿಮ ಘಟ್ಟದಲ್ಲಿ ಹುಟ್ಟಿ, ಹರಿಯುವ ನದಿಯ ನೀರು ಬಳಸುವ ನಗರಗಳಿಗೆ ಹಸಿರು ಸೆಸ್ ವಿಧಿಸಲು ಅರಣ್ಯ ಇಲಾಖೆ ಚಿಂತನೆ ನಡೆಸಿದೆ.

ಈ ಕುರಿತು ಪ್ರಸ್ತಾವ ಸಲ್ಲಿಸುವಂತೆ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಗೆ ಸೂಚನೆ ನೀಡಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ, ಜೀವವೈವಿಧ್ಯ ತಾಣವಾದ ಪಶ್ಚಿಮಘಟ್ಟ ಹಲವು ನದಿಗಳ ಮೂಲವಾಗಿದೆ. ತುಂಗಾ, ಭದ್ರಾ, ಕಾವೇರಿ, ಕಬಿನಿ, ಹೇಮಾವತಿ, ಕೃಷ್ಣಾ, ಮಲಪ್ರಭಾ, ಘಟಪ್ರಭಾ ಸೇರಿದಂತೆ ಹಲವು ನದಿಗಳ ನೀರು ರಾಜ್ಯದ ಹಲವು ನಗರ, ಪಟ್ಟಣ ಪ್ರದೇಶಗಳಿಗೆ ಪೂರೈಕೆ ಮಾಡಲಾಗುತ್ತಿದೆ. ಮುಂದೆಯೂ ರಾಜ್ಯದ ನೀರಿನ ಅಗತ್ಯವನ್ನು ಈ ನದಿಗಳೇ ಪೂರೈಸಬೇಕಾಗುತ್ತದೆ. ಹಾಗಾಗಿ, ಈ ಎಲ್ಲ ನದಿಗಳ ಮೂಲವಾಗಿರುವ ಪಶ್ಚಿಮಘಟ್ಟವನ್ನು ಸಂರಕ್ಷಿಸಲು ಹಸಿರುವ ಸೆಸ್ ವಿಧಿಸುವ ಅಗತ್ಯವಿದೆ ಎಂದಿದ್ದಾರೆ.

ಮಂಗಾರು ಮಳೆಯ ಮಾರುತಗಳನ್ನು ತಡೆದು ವ್ಯಾಪಕ ಮಳೆ ಸುರಿಸುವಲ್ಲಿ ಪಶ್ಚಿಮಘಟ್ಟಗಳು ಮಹತ್ವದ ಪಾತ್ರ ವಹಿಸುತ್ತವೆ. ಪಶ್ಚಿಮಘಟ್ಟದ ನದಿಗಳಿಂದ ನಗರ, ಪಟ್ಟಣಗಳಿಗೆ ಪೂರೈಕೆ ಆಗುವ ನೀರಿನ ಬಳಕೆಯ ಬಿಲ್ನಲ್ಲಿ ಕೆಲವು ರೂಪಾಯಿ ಹಸಿರು ಸೆಸ್ ವಿಧಿಸಿ, ಕಾಪು ನಿಧಿ ಸ್ಥಾಪಿಸಬೇಕು. ಈ ಹಣವನ್ನು ಪಶ್ಚಿಮಘಟ್ಟ ಅರಣ್ಯ ಅಭಿವೃದ್ಧಿಗಾಗಿ, ವೃಕ್ಷ ಸಂವರ್ಧನೆಗೆ ಬಳಸಬಹುದು ಎಂದು ಹೇಳಿದ್ದಾರೆ.

ಅರಣ್ಯದಂಚಿನ ರೈತರು ಸ್ವಯಂ ಪ್ರೇರಿತವಾಗಿ ಅರಣ್ಯ ಇಲಾಖೆಗೆ ಮಾರಾಟ ಮಾಡಲು ಇಚ್ಛಿಸುವ ಕೃಷಿ ಭೂಮಿಯ ಖರೀದಿಗಾಗಿ, ಅರಣ್ಯ ಸಂರಕ್ಷಿಸಲು ಮತ್ತು ವನ್ಯಜೀವಿ- ಮಾನವ ಸಂಘರ್ಷ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೂ ಈ ಹಣ ಬಳಸಬಹುದು ಎಂದು ವಿವರ ನೀಡಿದ್ದಾರೆ.

ನೀರಿನ ಬಳಕೆದಾರರು ₹2 ಅಥವಾ ₹3 ಪಾವತಿಸಿದರೆ ಸಾಕು. ಅವರಲ್ಲಿ ಪಶ್ಚಿಮ ಘಟ್ಟದ ಮಹತ್ವದ ಅರಿವು ಮೂಡುತ್ತದೆ. ಸಂಗ್ರಹವಾಗುವ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸುವುದಿಲ್ಲ.
–ಈಶ್ವರ ಖಂಡ್ರೆ, ಅರಣ್ಯ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.