ಬೆಂಗಳೂರು: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ನಿರ್ಣಾಯಕ ಘಟ್ಟ ತಲುಪಿದ್ದು, 2027ರ ಮಾರ್ಚ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಸುದ್ದಿಗಾರರ ಜೊತೆ ಶುಕ್ರವಾರ ಮಾತನಾಡಿದ ಅವರು, ಹಲವು ಹಂತಗಳಲ್ಲಿ ಪೂರ್ವ ಪರೀಕ್ಷಾರ್ಥ ಪ್ರಯೋಗಗಳು ಯಶಸ್ವಿಯಾಗಿವೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ, ಪಶ್ಚಿಮಘಟ್ಟದದಲ್ಲಿ ಹರಿಯುವ ಎತ್ತಿನಹೊಳೆ, ಕಾಡುಮನೆಹೊಳೆ, ಕೇರಿಹೊಳೆ ಮತ್ತು ಹೊಂಗದಹಳ್ಳಗಳಿಂದ ಮುಂಗಾರು ಮಳೆ ಅವಧಿಯಲ್ಲಿ (139 ದಿನಗಳು) 24.01 ಟಿಎಂಸಿ ಅಡಿ ನೀರನ್ನು ಬಳಸಿಕೊಳ್ಳಲಾಗುತ್ತದೆ. ಈ ಯೋಜನೆ ಅನುಷ್ಠಾನದಿಂದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಹಾಗೂ ಚಿಕ್ಕಮಗಳೂರು ಹಾಗೂ ಅಲ್ಲಿನ ಜಾನುವಾರುಗಳಿಗೆ ಒಟ್ಟು 14.056 ಟಿಎಂಸಿ ಅಡಿ ಕುಡಿಯುವ ನೀರು ಒದಗಿಸಲಾಗುವುದು. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಹಾಸನ ಹಾಗೂ ತುಮಕೂರು ವ್ಯಾಪ್ತಿಯ 527 ಕೆರೆಗಳಿಗೆ 9.953 ಟಿಎಂಸಿ ಅಡಿ ನೀರನ್ನು ಕೆರೆಗಳಿಗೆ ತುಂಬಿಸಲಾಗುವುದು ಎಂದರು.

2014ರಲ್ಲಿ ಆರಂಭಗೊಂಡ ₹23,251ಕೋಟಿ ವೆಚ್ಚದ ಯೋಜನೆಯಲ್ಲಿ ಈಗಾಗಲೇ ₹16,152 ಕೋಟಿ ವ್ಯಯಿಸಲಾಗಿದೆ. ಮೂರು ಹಂತಗಳು ಪೂರ್ಣಗೊಂಡಿವೆ. ಪ್ರಸ್ತುತ ಪ್ರಗತಿಯಲ್ಲಿರುವ ಚಟುವಟಿಕೆಗಳನ್ನು ಪೂರ್ಣಗೊಳಿಸಿ, ಪ್ರಾಯೋಗಿಕ ಚಾಲನೆ ನೀಡಲಾಗುವುದು ಎಂದು ಹೇಳಿದರು.

ಎತ್ತಿನಹೊಳೆ ಯೋಜನೆಯ ಜಲಾನಯನ ಪ್ರದೇಶದಲ್ಲಿ ನೀರಿನ ಹರಿವು ಅಳೆಯಲು ಜರ್ಮನ್ ತಂತ್ರಜ್ಞಾನವನ್ನೊಳಗೊಂಡ ‘ಟೆಲಿಮೀಟರಿ’ ವ್ಯವಸ್ಥೆ ಸ್ಥಾಪಿಸಲಾಗಿದೆ. ಪ್ರಸಕ್ತ ಮುಂಗಾರಿನಲ್ಲಿ ಆ.20 ರವರೆಗೆ 13.34 ಟಿಎಂಸಿ ಅಡಿ ನೀರು ದಾಖಲಾಗಿದೆ. ಅದರಲ್ಲಿ ಯೋಜನೆಗೆ 9.23 ಟಿಎಂಸಿ ಅಡಿ ಬಳಸಬಹುದಾಗಿದೆ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.