ಬೆಂಗಳೂರು: ಆರ್ಥಿಕವಾಗಿ ದುರ್ಬಲರಾಗಿರುವವರಿಗೆ ವೈದ್ಯಕೀಯ ಶಿಕ್ಷಣದಲ್ಲಿ ಶೇಕಡ 10ರಷ್ಟು ಮೀಸಲಾತಿ ನೀಡುವ ಕೇಂದ್ರ ಸರ್ಕಾರದ ನಿರ್ಣಯವನ್ನು ರಾಜ್ಯದಲ್ಲೂ ಅನುಷ್ಠಾನಕ್ಕೆ ತರಲು ನಿರ್ಧರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ್ ತಿಳಿಸಿದರು.

‘ಮಲ್ಲೇಶ್ವರ ಬ್ರಾಹ್ಮಣ ಮಹಾಸಭಾ’ ಹಾಗೂ ‘ಉಭಯ ವೇದಾಂತ ಪ್ರವರ್ತನಾ ಸಭಾ’ ಸಹಭಾಗಿತ್ವದಲ್ಲಿ ಮಲ್ಲೇಶ್ವರದಲ್ಲಿ ಭಾನುವಾರ ಆಯೋಜಿಸಿದ್ದ ಬ್ರಾಹ್ಮಣ ಸಮುದಾಯದವರಿಗೆ ಆಹಾರ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೈಗೊಂಡಿರುವ ನಿರ್ಧಾರವನ್ನು ರಾಜ್ಯದಲ್ಲೂ ಜಾರಿಗೆ ತರಲು ಇತ್ತೀಚೆಗೆ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸದ್ಯದಲ್ಲೇ ಈ ಸಂಬಂಧ ಆದೇಶ ಹೊರಡಿಸಲಾಗುವುದು. ಆರ್ಥಿಕವಾಗಿ ದುರ್ಬಲರಿಗೆ ಮೀಸಲಾತಿ ಸೌಲಭ್ಯ ಕಲ್ಪಿಸಿರುವುದರಿಂದ ಬ್ರಾಹ್ಮಣ ಸಮುದಾಯದಲ್ಲಿನ ಬಡವರಿಗೂ ಅನುಕೂಲವಾಗಲಿದೆ’ ಎಂದರು.

ಬ್ರಾಹ್ಮಣ ಸಮುದಾಯದ ಮುಖಂಡರಾದ ಪ್ರಕಾಶ್ ಅಯ್ಯಂಗಾರ್, ಪ್ರಶಾಂತ್ ಹಾಜರಿದ್ದರು. 150 ಕುಟುಂಬಗಳಿಗೆ ಆಹಾರ ಕಿಟ್ ವಿತರಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.