ಬೆಂಗಳೂರು: ಉಡುಪಿ ಜಿಲ್ಲೆಯ ಕೋಟದಲ್ಲಿ ಕೊರಗ ಸಮುದಾಯದವರ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯ ಮತ್ತೊಂದು ‘ಜೈ ಭೀಮ್’ ಕಥೆ ಆಗದಿರಲಿ ಎಂದು ಕಾಂಗ್ರೆಸ್ ಮುಖಂಡ ಎಚ್.ಸಿ. ಮಹದೇವಪ್ಪ ಹೇಳಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಅವರು,ಮದುವೆ ಸಮಾರಂಭದಲ್ಲಿ ಡಿಜೆ ಸೌಂಡ್ ಬಳಸಿದ್ದಕ್ಕೆ ಕೊರಗ ಸಮುದಾಯದವರ ಮೇಲೆ ದೌರ್ಜನ್ಯ ನಡೆಸಿದ್ದ ಪೊಲೀಸರು ಮೇಲೆ ಕ್ರಮ ಕೈಗೊಳ್ಳುವುದಾಗಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದರು. ವಿಚಿತ್ರ ಎಂದರೆ, ಹಲ್ಲೆಗೊಳಗಾದ ಕೊರಗರ ಮೇಲೆಯೇ ಪೊಲೀಸರು ಜಾಮೀನು ರಹಿತ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದು ನಿಜವಾಗಿದ್ದಲ್ಲಿ ಅಂದೇ ಏಕೆ ಪ್ರಕರಣ ದಾಖಲಿಸಲಿಲ್ಲ. ವಿಷಯ ಗಂಭೀರ ತಿರುವು ಪಡೆಯುತ್ತಿದ್ದಂತೆ ಪ್ರಕರಣ ದಾಖಲಿಸಿರುವುದನ್ನು ನೋಡಿದರೆ ಪೊಲೀಸರು ಹೇಳುತ್ತಿರುವುದು ಸುಳ್ಳೆಂದು ತೋರುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.