ಚಾಮರಾಜನಗರ: ಶನಿವಾರ ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಅವರ ಅಂತ್ಯಕ್ರಿಯೆ ಸರ್ಕಾರಿ ಗೌರವಗಳೊಂದಿಗೆ ಅವರ ಹುಟ್ಟೂರು ತಾಲ್ಲೂಕಿನ ಹೆಗ್ಗವಾಡಿಯಲ್ಲಿ ಭಾನುವಾರ ಮಧ್ಯಾಹ್ನ ನಡೆಯಿತು.

ಹಿಂದೂ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು.

ಇದಕ್ಕೂ ಮೊದಲು ಅಗಲಿದ ನಾಯಕನಿಗೆ ಸರ್ಕಾರಿ ಗೌರವ ಸಲ್ಲಿಸಲಾಯಿತು. ಪೊಲೀಸರು ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ, ರಾಷ್ಟ್ರಗೀತೆ ಮೊಳಗಿಸಿ, ಒಂದು ನಿಮಿಷ ಮೌನಾಚರಣೆ ಮಾಡಿ ಗೌರವ ಸಲ್ಲಿಸಿದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಶಾಮನೂರು ಶಿವಶಂಕರಪ್ಪ ಮತ್ತಿತರ ಮುಖಂಡರು ಪಾರ್ಥಿವ ಶರೀರಕ್ಕೆ ಪುಷ್ಪ ಗುಚ್ಛ ಇಟ್ಟು ಅಂತಿಮ ನಮನ ಸಲ್ಲಿಸಿದರು.

ಮನೆಯವರಿಂದ ಪೂಜೆ: ಅಂತ್ಯಕ್ರಿಯೆ ನಡೆಸಲು ನಿಗದಿಯಾಗಿದ್ದ ಜಾಗದಲ್ಲಿ ಕುಟುಂಬಸ್ಥರು ಮೃತದೇಹಕ್ಕೆ ಪೂಜೆ ಸಲ್ಲಿಸಿದರು. ಸಮಾಧಿ ಸ್ಥಳಕ್ಕೆ ಪೂಜೆ ಸಲ್ಲಿಸಿದ ನಂತರ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.