ಬೆಂಗಳೂರು: ‘ಗೃಹ ಜ್ಯೋತಿ’ ಯೋಜನೆಯಡಿ ತಿಂಗಳಿಗೆ 48 ಯೂನಿಟ್‌ಗಳಿಗಿಂತ ಕಡಿಮೆ ವಿದ್ಯುತ್ ಬಳಸುವ ಎಲ್‌ಟಿ 2 ಗ್ರಾಹಕರಿಗೆ ಹೆಚ್ಚುವರಿ ಶೇ 10 ಬದಲು ಹೆಚ್ಚುವರಿ 10 ಯೂನಿಟ್‌ಗಳನ್ನು ಅರ್ಹತಾ ಯೂನಿಟ್‌ಗಳನ್ನಾಗಿ ಒದಗಿಸಲು ನಿರ್ಧರಿಸಲಾಗಿದೆ ಎಂದು ಎಚ್.ಕೆ.ಪಾಟೀಲ ತಿಳಿಸಿದರು.

ಒಬ್ಬ ಗ್ರಾಹಕ 150 ಯೂನಿಟ್ ಬಳಸುತ್ತಿದ್ದರೆ, ಈಗ 15 ಯೂನಿಟ್ ಹೆಚ್ಚುವರಿಯಾಗಿ ಸಿಗುತ್ತಿದೆ. ಹೊಸ ತೀರ್ಮಾನದಿಂದ 5 ಯೂನಿಟ್ ಕಡಿತ ಆಗುತ್ತದೆ. ಆದರೆ, 48 ಯೂನಿಟ್‌ಗಿಂತ ಕಡಿಮೆ ಬಳಸುವ ಗ್ರಾಹಕರಿಗೆ 10 ಯೂನಿಟ್ ಕೊಡುವುದರಿಂದ ಅನುಕೂಲವಾಗುತ್ತದೆ ಎಂದರು. 30 ಯೂನಿಟ್‌ಗಳನ್ನು ಬಳಸುವ ಬಡ ಕುಟುಂಬಗಳಿಗೆ ಅರ್ಹತಾ ಯೂನಿಟ್‌ಗಳು ಕೇವಲ 3 ಆಗಿದೆ. ರಾಜ್ಯದಲ್ಲಿ 1.95 ಕೋಟಿ ಗೃಹ ಬಳಕೆಯ ಗ್ರಾಹಕರು ಸರಾಸರಿ 53 ಯೂನಿಟ್ ಬಳಕೆ ಮಾಡುತ್ತಾರೆ. ಬೆಸ್ಕಾಂನಲ್ಲಿ 69.73 ಲಕ್ಷ ಕುಟುಂಬಗಳು 48 ಯೂನಿಟ್‌ಗಿಂತ ಕಡಿಮೆ ಬಳಕೆ ಮಾಡುತ್ತಿದ್ದು, 10 ಯೂನಿಟ್‌ಗಳ ಹೆಚ್ಚಳದಿಂದಾಗಿ ₹33 ಕೋಟಿ ವೆಚ್ಚ ಆಗಲಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.