ಬೆಂಗಳೂರು: ಖ್ಯಾತ ನೇತ್ರ ತಜ್ಞ ಹಾಗೂ ನಾರಾಯಣ ನೇತ್ರಾಲಯದ ಅಧ್ಯಕ್ಷ ಡಾ.ಕೆ.ಭುಜಂಗ ಶೆಟ್ಟಿ (69) ಅವರು ಹೃದಯಾಘಾತದಿಂದ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ.

ನಾರಾಯಣ ನೇತ್ರಾಲಯದಲ್ಲಿ ಕರ್ತವ್ಯ ನಿರ್ವಹಿಸಿ, ಸಂಜೆ ಮನೆಗೆ ತೆರಳಿದ್ದರು. ವ್ಯಾಯಾಮದ ಬಳಿಕ ಎದೆಯಲ್ಲಿ ನೋವು ಕಾಣಿಸಿಕೊಂಡು, ಹೃದಯಾಘಾತ ಸಂಭವಿಸಿತ್ತು. ಕುಟುಂಬಸ್ಥರು ಅವರನ್ನು ಯಶವಂತಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ರಾತ್ರಿ ವೇಳೆಗೆ ನಿಧನರಾದರು.

1978 ರಲ್ಲಿ ಎಂಬಿಬಿಎಸ್ ಮಾಡಿದ ಅವರು, ಬೆಂಗಳೂರು ವೈದ್ಯಕೀಯ ಕಾಲೇಜಿನ ಹಳೆಯ ವಿದ್ಯಾರ್ಥಿಯಾಗಿದ್ದಾರೆ. 1982 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನ ಮಿಂಟೋ ಆಸ್ಪತ್ರೆಯಲ್ಲಿ ನೇತ್ರಶಾಸ್ತ್ರದ ರೆಸಿಡೆನ್ಸಿ ಮಾಡಿದರು. ಬಳಿಕ ಸಣ್ಣ ಕ್ಲಿನಿಕ್‌ನಲ್ಲಿ ನೇತ್ರ ಚಿಕಿತ್ಸೆ ಪ್ರಾರಂಭಿಸಿದರು. ಅದು ಬಹು ವಿಶೇಷ ಕಣ್ಣಿನ ಆಸ್ಪತ್ರೆಯಾಗಿ ಮಾರ್ಪಟ್ಟಿತು. ನಾರಾಯಣ ನೇತ್ರಾಲಯವನ್ನು ಕರ್ನಾಟಕದ ಅತಿದೊಡ್ಡ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಾಗಿ ಪರಿವರ್ತಿಸಲು ಅವರು ಕಾರಣರಾಗಿದ್ದಾರೆ. ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಅವರು ನಿಪುಣರಾಗಿದ್ದರು.

ರಾಜಾಜಿನಗರದ ನಾರಾಯಣ ನೇತ್ರಾಲಯದಲ್ಲಿ ಶನಿವಾರ ಬೆಳಿಗ್ಗೆ 11ರಿಂದ ಮಧ್ಯಾಹ್ನ 2 ಗಂಟೆವರೆಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ಇರಲಿದೆ. ಅವರು ತಮ್ಮ ನೇತ್ರಗಳನ್ನು ದಾನ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.