ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಮತ್ತೊಮ್ಮೆ ಉದ್ಧಟತನ ಮೆರೆದಿದ್ದಾರೆ. ಹಿಂದೆ; ಕರ್ನಾಟಕ & ಕನ್ನಡಿಗರ ಬಗ್ಗೆ ಕೀಳು ಅಭಿರುಚಿಯ ಹೇಳಿಕೆಗಳನ್ನು ನೀಡಿದ್ದ ಅವರು, ಪುನಾ ತಮ್ಮ ನಾಲಿಗೆ ಹರಿಬಿಟ್ಟಿದ್ದಾರೆ. ಇದು ಖಂಡನೀಯ. 1/8
ಕರ್ನಾಟಕದ ಗಡಿಭಾಗದಲ್ಲಿ ಮರಾಠಿ ಭಾಷಿಗರು ಇರುವ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲು ನಮ್ಮ ಸರಕಾರದ ಬೆಂಬಲವಿದೆ ಎಂದು ಪುಣೆಯಲ್ಲಿ ಅವರಿಂದು ʼಅಪರಿಪಕ್ವʼ ಹೇಳಿಕೆ ನೀಡಿದ್ದಾರೆ. ಹಾಗೆ ನೋಡಿದರೆ, ಕನ್ನಡಿಗರೇ ಹೆಚ್ಚಿರುವ ಅನೇಕ ಪ್ರದೇಶಗಳು ಮಹಾರಾಷ್ಟ್ರಕ್ಕೂ ಸೇರ್ಪಡೆಯಾಗಿವೆ ಎಂಬುದನ್ನು ಪವಾರ್ ಮರೆಯಬಾರದು.2/8