ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎಸ್.ಕೆ ಭಗವಾನ್ ಅವರು ಸೋಮವಾರ ವಿಧಿವಶರಾದರು.

ಅವರ ನಿಧನಕ್ಕೆ ಚಿತ್ರರಂಗ, ರಾಜಕೀಯ ರಂಗದ ಗಣ್ಯರು ಕಂಬನಿ ಮಿಡಿಸಿದ್ದಾರೆ.

ಮುಖ್ಯಮಂತ್ರಿ ಬೊಮ್ಮಾಯಿ, ಬಿ.ಎಸ್ ಯಡಿಯೂರಪ್ಪ, ಸಿದ್ದರಾಮಯ್ಯ, ಕುಮಾರಸ್ವಾಮಿ ಸೇರಿದಂತೆ ಹಲವರು ಶೋಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎಸ್. ಕೆ. ಭಗವಾನ್ ಇನ್ನಿಲ್ಲ

ಎಸ್. ಕೆ. ಭಗವಾನ್ ರವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ಅತ್ಯಂತ ಬೇಸರವಾಯಿತು. ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಅವರ ಕುಟುಂಬವರ್ಗದವರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ದೊರೈ-ಭಗವಾನ್ ಜೋಡಿಯು ಕನ್ನಡ ಚಿತ್ರರಂಗಕ್ಕೆ ಅನೇಕ ಸದಭಿರುಚಿಯ ಚಿತ್ರಗಳನ್ನು ನೀಡಿದೆ. ಡಾ. ರಾಜ್ ಕುಮಾರ್ ನಟನೆಯ ‘ಕಸ್ತೂರಿ ನಿವಾಸ’, ‘ಎರಡು ಕನಸು’, ‘ಬಯಲು ದಾರಿ’, ‘ಗಿರಿ ಕನ್ಯೆ’, ‘ಹೊಸ ಬೆಳಕು’ ಸೇರಿದಂತೆ 55 ಚಿತ್ರಗಳನ್ನು ಸ್ನೇಹಿತ ದೊರೈ ರಾಜ್ ಜೊತೆ ಸೇರಿ ನಿರ್ದೇಶಿಸಿದ್ದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದಾರೆ.

– ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ನಿರ್ದೇಶಕ ಎಸ್.ಕೆ.ಭಗವಾನ್ ನಿಧನರಾದ ಸುದ್ದಿ ತೀವ್ರ ದುಃಖವನ್ನುಂಟು ಮಾಡಿದೆ. ಅವರ ನಿಧನದಿಂದ ಕನ್ನಡ ಚಿತ್ರರಂಗ ಒಬ್ಬ ಹಿರಿಯ ನಿರ್ದೇಶಕರನ್ನು ಕಳೆದುಕೊಂಡಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ. ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ.

– ಬಿ.ಎಸ್ ಯಡಿಯೂರಪ್ಪ, ಬಿಜೆಪಿ ನಾಯಕ

ಕನ್ನಡ ಕಲಾ ಜಗತ್ತು ಮತ್ತು ಸಿನಿಮಾ ಪ್ರಪಂಚವನ್ನು ಬೆಳಗಿ ಬೆಳ್ಳಿತೆರೆಯನ್ನು ಶ್ರೀಮಂತಗೊಳಿಸಿದ್ದ ಹಿರಿಯ ನಿರ್ದೇಶಕ ಎಸ್.ಕೆ.ಭಗವಾನ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಅಭಿಮಾನಿಗಳು ಮತ್ತು ಕುಟುಂಬ ವರ್ಗಕ್ಕೆ ದೇವರು ಕರುಣಿಸಲೆಂದು ಪ್ರಾರ್ಥಿಸುತ್ತೇನೆ.

– ಸಿದ್ದರಾಮಯ್ಯ, ವಿಧಾನಸಭೆ ವಿರೋಧ ಪಕ್ಷದ ನಾಯಕ

ಎಸ್.ಕೆ ಭಗವಾನ್ ಅವರು ನಿಧನರಾದ ಸುದ್ದಿ ತಿಳಿದು ಮನಸ್ಸಿಗೆ ಅಪಾರ ನೋವಾಯಿತು. ಸದಭಿರುಚಿಯ ಹಾಗೂ ಕಾದಂಬರಿ ಆಧಾರಿತ ಚಿತ್ರಗಳ ಮೂಲಕ ಅವರು ಕನ್ನಡ ಚಿತ್ರರಂಗದ ಕೀರ್ತಿಕಳಶದಂತಿದ್ದರು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬದವರು ಹಾಗೂ ಅಭಿಮಾನಿಗಳ ನೋವಿನಲ್ಲಿ ನಾನೂ ಕೂಡ ಭಾಗಿ.

– ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕರು, ಅನೇಕ ಸದಭಿರುಚಿಯ ಚಿತ್ರಗಳನ್ನು ಕೊಟ್ಟವರು, ವರನಟರಾದ ಡಾ.ರಾಜ್ ಕುಮಾರ್ ಅವರು ನಟಿಸಿದ ' ಕಸ್ತೂರಿ ನಿವಾಸ ' ದಂಥ ಆವಿಸ್ಮರಣೀಯ ಚಿತ್ರವನ್ನು ನಿರ್ದೇಶನ ಮಾಡಿದ್ದ ಭಗವಾನ್ ಅವರು ನಿಧನರಾದರೆಂಬ ಸುದ್ದಿ ಕೇಳಿ ಬಹಳ ದುಃಖವಾಯಿತು. ಭಗವಾನ್ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಆ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

– ಎಚ್.ಡಿ ಕುಮಾರಸ್ವಾಮಿ, ಜೆಡಿಎಸ್ ನಾಯಕ

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಭಗವಾನ್ ವಿಧಿವಶರಾದ ಸುದ್ದಿ ಆಘಾತ ತಂದಿದೆ. ಸ್ಯಾಂಡಲ್ವುಡ್ನ ದಂತಕಥೆ ಎಂದೇ ಪ್ರಖ್ಯಾತಿ ಪಡೆದಿದ್ದ ಭಗವಾನ್ ಡಾ.ರಾಜ್ರವರ ಅನೇಕ ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿದ್ದರು. ಮತ್ತೊಬ್ಬ ನಿರ್ದೇಶಕ ದೊರೈರಾಜ್ ಜೊತೆ ಭಗವಾನ್ 27 ಚಿತ್ರಗಳನ್ನು ನಿರ್ದೇಶಿಸಿದ್ದರು. ಅಗಲಿದ ಚೇತನಕ್ಕೆ ಅಶ್ರುತರ್ಪಣಗಳು.

– ದಿನೇಶ್ ಗುಂಡುರಾವ್, ಕಾಂಗ್ರೆಸ್ ಶಾಸಕ

ಕನ್ನಡ ಸಿನಿಮಾ ರಂಗದ ಹೆಸರಾಂತ ನಿರ್ದೇಶಕ ಭಗವಾನ್ ಅಗಲಿಕೆಯ ಸುದ್ದಿ ಅಪಾರ ನೋವನ್ನುಂಟು ಮಾಡಿದೆ. ಕನ್ನಡ ಸಿನಿಮಾ ರಂಗಕ್ಕೆ 24ಕ್ಕೂ ಹೆಚ್ಚು ಕಾದಂಬರಿ ಆಧಾರಿತ ಸಿನಿಮಾಗಳನ್ನು ಕೊಟ್ಟು, ಸಾಹಿತ್ಯ ಮತ್ತು ಸಿನಿಮಾ ರಂಗವನ್ನು ಬೆಸೆದ ಅಪರೂಪದ ನಿರ್ದೇಶಕ ಅವರು. ದೊರೈ ಮತ್ತು ಭಗವಾನ್ ಸಿನಿಮಾ ರಂಗದ ಎರಡು ಕಣ್ಣುಗಳು.

– ಸುಮಲತಾ, ಸಂಸದೆ

ಕಸ್ತೂರಿ ನಿವಾಸ, ಜೀವನಚೈತ್ರ, ಚಂದನದ ಗೊಂಬೆ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಹೆಸರಾಂತ ನಿರ್ದೇಶಕರಾದ ಭಗವಾನ್ ಅವರ ನಿಧನದಿಂದ ಕನ್ನಡ ಚಲನಚಿತ್ರರಂಗ ಬಡವಾಗಿದೆ. ಭಗವಂತ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ ನೀಡಲೆಂದು ಪ್ರಾರ್ಥಿಸುತ್ತೇನೆ.

– ಸುಧಾಕರ್, ಆರೋಗ್ಯ ಸಚಿವ

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕರಾದ ಭಗವಾನ್ ಅವರ ನಿಧನದ ಸುದ್ದಿ ತಿಳಿದು ಅತೀವ ದುಃಖವಾಯಿತು. ತಮ್ಮ ನಿರ್ದೇಶನದ ಮೂಲಕ ಕನ್ನಡ ಚಿತ್ರರಂಗಕ್ಕೆ ಅತ್ಯುತ್ತಮ ಚಿತ್ರಗಳನ್ನು ನೀಡಿ, ಅಪಾರ ಸೇವೆ ಸಲ್ಲಿಸಿದ ಅವರಿಗೆ ಅನಂತ ಕೋಟಿ ನಮನಗಳು.

– ಬಿ.ಸಿ ಪಾಟೀಲ್, ಕೃಷಿ ಸಚಿವ

ಭಗವಾನ್ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ದೊರೈ-ಭಗವಾನ್ ಜೋಡಿ ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಮೂಲ್ಯ. ಭಗವಂತನು ಅವರ ಆತ್ಮಕ್ಕೆ ಸದ್ಗತಿ ಕರುಣಿಸಿ ಅವರ ಕುಟುಂಬದವರಿಗೆ ಹಾಗೂ ಕಲಾರಸಿಕರಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ.

– ನಳೀನ್ ಕುಮಾರ್ ಕಟೀಲ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ

ಭಗವಾನ್ ಅವರು ನಿಧನರಾಗಿದ್ದು ತಿಳಿದು ದುಃಖವಾಯಿತು. ಭಗವಾನ್ ಅವರ ಆತ್ಮಕ್ಕೆ ಶಾಂತಿ ಸಿಗಲಿ. ದೇವರು ಅವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ.

– ಶಿವರಾಮ್ ಹೆಬ್ಬಾರ್, ಕಾರ್ಮಿಕ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.