ಬಳ್ಳಾರಿ:ಅಲ್ಪಸಂಖ್ಯಾತರ ವಿರುದ್ಧ ದ್ವೇಷ ಮತ್ತು ಪ್ರಚೋದನಾಕಾರಿಯಾಗಿ ಮಾತನಾಡಿರುವ ಶಾಸಕ ಜಿ. ಸೋಮಶೇಖರ ರೆಡ್ಡಿ ವಿರುದ್ಧ ಶನಿವಾರ ಎಫ್ಐಆರ್ ದಾಖಲಾಗಿದೆ.

ಸೌಹಾರ್ದತೆ ಮತ್ತು ಸಾಮರಸ್ಯಕ್ಕೆ ಭಂಗ ಉಂಟು ಮಾಡುವ ರೀತಿಯಲ್ಲಿ ಸೋಮಶೇಖರ ರೆಡ್ಡಿ ಮಾತನಾಡಿರುವ ಹಿನ್ನೆಲೆಯಲ್ಲಿಇಲ್ಲಿನ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಸ್ಥಳೀಯ ಕಾಂಗ್ರೆಸ್ ಮುಖಂಡ ವಿವೇಕ್ ನೀಡಿದ ದೂರಿನ ಅನ್ವಯಸೋಮಶೇಖರ ರೆಡ್ಡಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಇದನ್ನೂ ಓದಿ:ನಮ್ಮ ದೇಶದಲ್ಲಿರಬೇಕೆಂದರೆ ನಾವು ಹೇಳಿದಂತೆ ಕೇಳಬೇಕು: ಶಾಸಕ ಸೋಮಶೇಖರ ರೆಡ್ಡಿ

ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಶುಕ್ರವಾರ ನಗರದಲ್ಲಿ ನಡೆದ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ‘ದೇಶದ ಭದ್ರತೆಗೆ ಪೌರತ್ವ ತಿದ್ದುಪಡಿ ಕಾಯ್ದೆ ತರಲಾಗಿದ್ದು, ಅದನ್ನು ಎಲ್ಲರೂ ಬೆಂಬಲಿಸಬೇಕು. ಕಾಯ್ದೆ ವಿರೋಧಿಸಿ ಮತ್ತೊಂದು ಸಲ ಬಳ್ಳಾರಿಯಲ್ಲಿ ಪ್ರತಿಭಟನೆ ನಡೆಸಿದರೆ ನಾವು ಸುಮ್ಮನೆ ಕೂರಲ್ಲ.ನಮ್ಮ ದೇಶದಲ್ಲಿ ಇರಬೇಕೆಂದರೆ ನಾವು ಹೇಳಿದಂತೆ ಕೇಳಬೇಕು. ಇಲ್ಲದಿದ್ದರೆ ಪರಿಸ್ಥಿತಿ ಬೇರೆಯೇ ಆಗುತ್ತೆ. ಹಿಂದೂಗಳನ್ನು ಕೆಣಕಬೇಡಿ ಎಂದು ಶಾಸಕ ಜಿ. ಸೋಮಶೇಖರ ರೆಡ್ಡಿ ಎಚ್ಚರಿಕೆ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.