ಆಜ್ ತಕ್ ರಾಷ್ಟ್ರೀಯ ಸುದ್ದಿ ವಾಹಿನಿಯಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಯೋಜನೆ ಕುರಿತು ಸುಳ್ಳು ಸುದ್ದಿ ಪ್ರಸಾರ ಮಾಡಲಾಗಿದೆ ಎಂದು ಆರೋಪಿಸಿ, ನೀಡಿದ ದೂರಿನ ಸಂಬಂಧ ವಾಹಿನಿಯ ಆಡಳಿತ ಮಂಡಳಿ ಹಾಗೂ ವಾಹಿನಿ ಪ್ರಧಾನ ಸಂಪಾದಕ ಸುಧೀರ್ ಚೌಧರಿ ವಿರುದ್ಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಯೋಜನೆಯ ಮೂಲಕ ಮುಸ್ಲಿಮರಿಗೆ ಮಾತ್ರ ₹3ಲಕ್ಷ ಸಬ್ಸಿಡಿ ನೀಡಲಾಗುತ್ತಿದೆ ಎಂದು ಸೆ.11ರಂದು ವರದಿ ಪ್ರಸಾರ ಮಾಡಲಾಗಿತ್ತು. ಮುಸ್ಲಿಮರಿಗೆ ಮಾತ್ರವಲ್ಲದೆ, ಇತರೆ ಮತೀಯ ಅಲ್ಪಸಂಖ್ಯಾತರಿಗೂ ಮತ್ತು ಹಿಂದುಳಿದ ವರ್ಗದವರಿಗೂ ಈ ಯೋಜನೆಯ ಸೌಲಭ್ಯ ದೊರೆಯುತ್ತಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.