ಮಸ್ಕಿ (ರಾಯಚೂರು ಜಿಲ್ಲೆ): ಪಟ್ಟಣದಲ್ಲಿ ಏಪ್ರಿಲ್ 28ರಂದು ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಟಿ ಉಮಾಶ್ರೀ ಅವರು ತಮ್ಮ ಭಾಷಣದಲ್ಲಿ ಬಳಸಿದ್ದ ಪದಗಳಿಗೆ ಸಂಬಂಧಿಸಿ ಅವರ ವಿರುದ್ಧ ಚುನಾವಣಾ ವಿಚಕ್ಷಣಾ ತಂಡದ ಸಿಬ್ಬಂದಿ ನೀಡಿದ ದೂರು ಆಧರಿಸಿ ಮಸ್ಕಿ ಠಾಣೆ ಪೊಲೀಸರು ಬುಧವಾರ ಎಫ್‌ಐಆರ್ ದಾಖಲಿಸಿದ್ದಾರೆ.

‘ಬಿಜೆಪಿ ನಾಯಕರು ವಿಷಜಂತುಗಳು ಮತ್ತು ಕೋಮುವಾದ ಸೃಷ್ಟಿಸಿ ಬೆಂಕಿ ಹಚ್ಚುವವರು’ ಎಂದು ಉಮಾಶ್ರೀ ಮಾತನಾಡಿದ್ದರು.

‘ಇಂಥ ಭಾಷಣದಿಂದ ಸಮಾಜದಲ್ಲಿ ಭಯದ ವಾತಾವರಣ ನಿರ್ಮಾಣಗೊಂಡು, ಸಾರ್ವಜನಿಕ ಜೀವನದಲ್ಲಿ ನೆಮ್ಮದಿ ಹಾಳಾಗುವ ಸಾಧ್ಯತೆ ಇರುತ್ತದೆ. ಚುನಾವಣಾ ನೀತಿಸಂಹಿತೆ ಉಲ್ಲಂಘನೆಯಾಗಿದೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.