ಬೆಂಗಳೂರು: ಕಣ್ಣುಕುಕ್ಕುವ ಎಲ್ಇಡಿ ದೀಪಗಳನ್ನು ಅಳವಡಿಕೆ ಮಾಡಿಕೊಂಡಿರುವ ವಾಹನ ಚಾಲಕರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ಪೊಲೀಸರು, ಜುಲೈ 1ರಿಂದ 7ರ ವರೆಗೆ ರಾಜ್ಯದಾದ್ಯಂತ ಒಟ್ಟು 8,244 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ಎಲ್ಇಡಿ ದೀಪಗಳನ್ನು ಅಳವಡಿಸಿಕೊಂಡಿರುವ ಚಾಲಕರ ವಿರುದ್ಧ ಕಠಿಣ ಕ್ರಮ ಕೈಗೊಂಡ ಮೊದಲ ರಾಜ್ಯ ಕರ್ನಾಟಕವಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ) ಅಲೋಕ್ ಕುಮಾರ್ ಅವರು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಮಾಹಿತಿ ನೀಡಿದ್ದಾರೆ.

ಕಾರು, ಬೈಕ್ ಹಾಗೂ ಇತರ ವಾಹನಗಳಲ್ಲಿ ಕಣ್ಣುಕುಕ್ಕುವಂತಹ ಎಲ್ಇಡಿ ದೀಪಗಳನ್ನು ಅಳವಡಿಸಿಕೊಂಡು ಅಪಘಾತಕ್ಕೆ ಕಾರಣ ಆಗುತ್ತಿರುವ ಸವಾರ ವಿರುದ್ಧ ಒಂದು ವಾರದಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಕೇಂದ್ರ ಮೋಟಾರ್ ಕಾಯ್ದೆ(ಸಿಎಂವಿ) ಉಲ್ಲಂಘಿಸುತ್ತಿರುವ ಬೈಕ್ ಸವಾರರು ಹಾಗೂ ವಾಹನ ಚಾಲಕರ ವಿರುದ್ಧ ಕ್ರಮ ಕೈಗೊಳ್ಳುತ್ತಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯ ಶ್ಲಾಘನೀಯ ಎಂದೂ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.