ಬೆಂಗಳೂರು: ‘ಭಾರತದಲ್ಲಿ ಟ್ವಿಟರ್ ಅನ್ನು ಮುಚ್ಚಿಸುವ ಬೆದರಿಕೆ ಇತ್ತು’ ಎಂಬ ಟ್ವಿಟರ್ನ ಸಹ ಸಂಸ್ಥಾಪಕ, ಮಾಜಿ ಸಿಇಒ ಜಾಕ್ ಡಾರ್ಸಿ ಹೇಳಿದ್ದು, ಇದಕ್ಕೆ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಡಿಕೆಶಿ, ‘ದೇಶ ಪ್ರಜಾಪ್ರಭುತ್ವದಿಂದ ಸರ್ವಾಧಿಕಾರದೆಡೆಗೆ ಸಾಗುತ್ತಿದೆ’ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

‘ಭಾರತದಲ್ಲಿ ಕೆಲವು ಟ್ವಿಟರ್ ಖಾತೆಗಳನ್ನು ನಿರ್ಬಂಧಿಸಬೇಕೆಂಬ ಸೂಚನೆ ಇತ್ತು. ಅದನ್ನು ಪಾಲಿಸದೇ ಹೋದಲ್ಲಿ ನಿರ್ಬಂಧ ವಿಧಿಸುವ ಬೆದರಿಕೆ ಎದುರಾಗಿತ್ತು. ಪತ್ರಕರ್ತರು ಮತ್ತು ಹೋರಾಟಗಾರರ ಸಾಮಾಜಿಕ ಮಾಧ್ಯಮ ಬಳಕೆಯನ್ನು ತಡೆಯಲು ಭಾರತ ಬಯಸುತ್ತದೆ’ ಎಂದು ಡಾರ್ಸಿ ಯುಟ್ಯೂಬ್ ಸುದ್ದಿ ಸಂಸ್ಥೆ ‘ಬ್ರೇಕಿಂಗ್’ಗೆ ನೀಡಿದ ಸಂದರ್ಶನದಲ್ಲಿ ಸೋಮವಾರ ಹೇಳಿದ್ದರು.

ಈ ಹಿನ್ನೆಲೆಯಲ್ಲಿ, ‘ಪ್ರಜಾಪ್ರಭುತ್ವದಿಂದ ಸರ್ವಾಧಿಕಾರದೆಡೆಗೆ...’ ಎಂಬ ಶೀರ್ಷಿಕೆಯೊಂದಿಗೆ ಟ್ವಿಟರ್ನಲ್ಲಿ ಪೋಸ್ಟ್ ಪ್ರಕಟಿಸಿರುವ ಡಿಕೆಶಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

‘ಟ್ವಿಟರ್ ಕಚೇರಿಯನ್ನು ಮುಚ್ಚುವ, ಟ್ವಿಟರ್ ಉದ್ಯೋಗಿಗಳ ಮನೆಗಳ ಮೇಲೆ ದಾಳಿ ಮಾಡುವ ಸರ್ಕಾರದ ಬೆದರಿಕೆಗಳ ಬಗ್ಗೆ ಟ್ವಿಟರ್ ಮಾಜಿ ಸಿಇಒ ಜಾಕ್ ಡಾರ್ಸಿ ಅವರು ಬಹಿರಂಗಪಡಿಸಿದ್ದಾರೆ. ರೈತರ ಪ್ರತಿಭಟನೆಯ ವೇಳೆ ದೇಶದಲ್ಲಿ ವಾಕ್ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವ ಆತಂಕಕಾರಿ ಸ್ಥಿತಿಯನ್ನು ತಲುಪಿದ್ದನ್ನು ಇದು ತೋರಿಸುತ್ತದೆ’ ಎಂದು ಡಿಕೆಶಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.