ಮೈಸೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಬಿಜೆಪಿ-ಜೆಡಿಸ್ ಮುಖಂಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಶಾಸಕ ಜಿ.ಟಿ.ದೇವಗೌಡ, ಅವರೆಲ್ಲರಿಗೂ ದೇವಿ ಚಾಮುಂಡೇಶ್ವರಿ ಒಳ್ಳೆ ಬುದ್ಧಿ ಕೊಡಲಿ ಎಂದರು.

ನಾಡಹಬ್ಬ ದಸರಾ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

'ಮುಡಾ ಪ್ರಕರಣದಲ್ಲಿ ಯಾರೆಲ್ಲರ ವಿರುದ್ಧ ಎಫ್ಐಆರ್ ದಾಖಲಾಗಿದೆಯೋ ಎಲ್ಲರೂ ರಾಜೀನಾಮೆ ಕೊಡಲಿ' ಎಂದು ಆಗ್ರಹಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಏಳುಬೀಳುಗಳನ್ನು ಸ್ವಾರಸ್ಯಕರವಾಗಿ ಸ್ಮರಿಸಿ, 'ಮೈಸೂರಿನ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ತಯಾರಿಸಬೇಕು' ಎಂದು ಕೋರಿದರು.

ಕಾರ್ಯಕ್ರಮದ ಕೊನೆಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 'ಬೇರೆ ಪಕ್ಷದಲ್ಲಿದ್ದುಕೊಂಡೇ ಶಾಸಕ ಜಿ.ಟಿ.ದೇವೇಗೌಡರು ಸತ್ಯವನ್ನು ಹೇಳಿದ್ದಾರೆ. ಅವರು ಮುಡಾ ಸದಸ್ಯರು. ಸತ್ಯಕ್ಕೇ ಸದಾ ಜಯ. ಈ ವರ್ಷವೂ ಐದು ವರ್ಷ ಮುಖ್ಯಮಂತ್ರಿಯಾಗಿ ಅವಧಿ ಪೂರೈಸುವೆ. ಚಾಮುಂಡೇಶ್ವರಿ ಹಾಗೂ ಜನರ ಆಶೀರ್ವಾದ ಇರುವವರೆಗೂ ಯಾರೂ ಏನೂ ಮಾಡಲಾಗದು' ಎಂದರು.

ಇದೇ ವೇಳೆ ಜಿ.ಟಿ.ದೇವೇಗೌಡರು ಮತ್ತು ತಮ್ಮ ನಡುವೆ ಚಾಮುಂಡೇಶ್ವರಿ ಕ್ಷೇತ್ರದ ಚುನಾವಣೆಗಳಲ್ಲಿ ಏರ್ಪಟ್ಟಿದ್ದ ಪೈಪೋಟಿಗಳ ಕುರಿತು ಸಿದ್ದರಾಮಯ್ಯ ಸ್ಮರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.