ರಾಯಚೂರು: ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮ ದಿನಾಚರಣೆ ನಿಮಿತ್ತ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ ಅವರು ಗಾಂಧೀಜಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ವಾರ್ತಾ ಇಲಾಖೆಯಿಂದ ಸಿದ್ಧಪಡಿಸಿದ್ದ ಸಾಕ್ಷ್ಯ ಚಿತ್ರಗಳನ್ನು ವೀಕ್ಷಿಸಿದರು. ಸಂಸದ ಬಿ.ವಿ.ನಾಯಕ, ವಿಧಾನ ಪರಿಷತ್ ಸದಸ್ಯ ಎಬ್.ಎಸ್. ಬೋಸರಾಜ, ಶಾಸಕ ಡಾ. ಶಿವರಾಜ ಪಾಟೀಲ ಹಾಗೂ ಜಿಲ್ಲಾಡಳಿತ ಅಧಿಕಾರಿಗಳು ಇದ್ದರು.

ಇದನ್ನೂ ಓದಿ... ಸುದೀರ್ಘ ಕಥನ: ‘ಗಾಂಧಿ@150’ ಕರುನಾಡಲ್ಲಿ ಮಹಾತ್ಮನ ಹೆಜ್ಜೆ

ಬೆಳಗಾವಿ: ಇಲ್ಲಿನ ತಿಲಕವಾಡಿಯ ವೀರಸೌಧದಲ್ಲಿ ಜಿಲ್ಲಾಡಳಿತದಿಂದ ಗಾಂಧಿ ಜಯಂತಿ ಆಚರಣೆ ಕಾರ್ಯಕ್ರಮ ನಡೆಯಿತು.

ಸಂಸದ ಸುರೇಶ ಅಂಗಡಿ, ಶಾಸಕ ಅನಿಲ ಬೆನಕೆ, ಮೇಯರ್ ಬಸಪ್ಪ ಚಿಕ್ಕಲದಿನ್ನಿ, ಉಪಮೇಯರ್ ಮಧುಶ್ರೀ ಪೂಜಾರಿ ಸೇರಿದಂತೆ ಹಲವು ನಾಯಕರು ಭಾಗವಹಿಸಿದರು.

ಇದನ್ನೂ ಓದಿ... ‘ಮಹಾತ್ಮ ಗಾಂಧೀಜಿ ಹಚ್ಚಿದ ಬೆಳಕಲ್ಲಿ...’: ಎಚ್.ಡಿ. ಕುಮಾರಸ್ವಾಮಿ ಲೇಖನ

ಕಸ ಗುಡಿಸಿದ ಕುಲಪತಿ, ಕುಲಸಚಿವ
ಕಲಬುರ್ಗಿ: ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಗಾಂಧಿ ಜಯಂತಿ ಹಾಗೂ ‘ಸ್ವಚ್ಛತಾ ಹಿ ಸೇವಾ’ ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.

ಕುಲಪತಿ ಪ್ರೊ.ಎಸ್.ಆರ್.ನಿರಂಜನ, ಕುಲಸಚಿವರಾದ ಪ್ರೊ.ಸಿ.ಸೋಮಶೇಖರ, ಪ್ರೊ.ಡಿ.ಎಂ.ಮದರಿ, ಹಣಕಾಸು ಅಧಿಕಾರಿ ಪ್ರೊ.ರಾಜನಾಳಕರ್ ಲಕ್ಷ್ಮಣ ಅವರು ಪೊರಕೆ ಹಿಡಿದುಕೊಂಡು ಕಸ ಗುಡಿಸಿದರು.

ಬಳಿಕ ವಿಶ್ವವಿದ್ಯಾಲಯದ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ಗಾಂಧಿ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಈ ವೇಳೆ ಮಾತನಾಡಿದ ಕುಲಪತಿ ನಿರಂಜನ, ‘ಪ್ರತಿಯೊಬ್ಬರೂ ಸ್ವಚ್ಛತೆಗೆ ಆದ್ಯತೆ ನೀಡಬೇಕು. ತಮ್ಮ ಸುತ್ತಲಿನ ಪ್ರದೇಶವನ್ನು ತಾವೇ ಸ್ವಚ್ಛ ಮಾಡಬೇಕು. ಅಕ್ಕಪಕ್ಕದ ಮನೆಯವರಿಗೂ ಸ್ವಚ್ಛತೆಯ ಬಗ್ಗೆ ತಿಳಿಹೇಳಬೇಕು’ ಎಂದರು.

ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ಧೂರ್ ಶಾಸ್ತ್ರಿ ಅವರ ತತ್ವ, ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಇದನ್ನೂ ಓದಿ...ಬೇಕಾಗಿದ್ದಾನೆ: ಗಾಂಧಿಯ ಹೆಗಲೇರಿದ ಗಾಂಧಿ

ಕಸ ಗುಡಿಸಿದ ಜಿಲ್ಲಾಧಿಕಾರಿ, ನ್ಯಾಯಾಧೀಶ
ಚಿತ್ರದುರ್ಗ: ಗಾಂಧಿ ಜಯಂತಿ ಅಂಗವಾಗಿ ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಸ್ವಚ್ಛತಾ ಆಂದೋಲನದಲ್ಲಿ ಜಿಲ್ಲಾಧಿಕಾರಿ ಆರ್.ಗಿರೀಶ್ ಹಾಗೂ ನ್ಯಾಯಾಧೀಶ ವಸ್ತ್ರಮಠ ಅವರು ಕಸಗುಡಿಸಿದರು.

ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಬೆಳಿಗ್ಗೆ 6.30 ರಿಂದ 8.30ರವರೆಗೆ ಸ್ವಚ್ಛತಾ ಕಾರ್ಯ ನಡೆಯಿತು. ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ವಸ್ತ್ರಮಠ ಅವರು ಪ್ರತಿಜ್ಞಾವಿಧಿ ಬೋಧಿಸಿದ ಬಳಿಕ ಸ್ವಚ್ಛತಾ ಕಾರ್ಯ ಆರಂಭವಾಯಿತು.

ನರ್ಸಿಂಗ್ ಕಾಲೇಜು, ಜಿಲ್ಲಾಡಳಿತ ಸಿಬ್ಬಂದಿ ಸೇರಿ ನೂರಕ್ಕೂ ಹೆಚ್ಚು ಜನ ಆಂದೋಲನದಲ್ಲಿ ಪಾಲ್ಗೊಂಡಿದ್ದರು. ಸಲಕರಣೆ ಹಿಡಿದ ಅಧಿಕಾರಿಗಳು ಕಸ ಗುಡಿಸಿ, ವಾಹನಗಳಿಗೆ ತುಂಬಿದರು.

ಇದನ್ನೂ ಓದಿ...ಗಾಂಧಿಯನ್ನು ಅರಿಯುವ ತುರ್ತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.