ನವದೆಹಲಿ: ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರಿಂದ ನನಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ಕೇಂದ್ರ ಭಾರಿ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ಗುರುವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ನಾನು ಕದ್ದು ಮುಚ್ಚಿ ಎಲ್ಲಿಗೂ ಓಡಿ ಹೋಗುವುದಿಲ್ಲ. ಪ್ರಕರಣದ ಸಂಬಂಧ ಈವರೆಗೆ ಯಾರೂ ನನ್ನನ್ನು ಸಂಪರ್ಕಿಸಿಲ್ಲ. ಕಾಂಗ್ರೆಸ್ ಸರ್ಕಾರವು ಸುಳ್ಳು ಹೇಳಿಕೆಗಳನ್ನು ನೀಡುವ ಮೂಲಕ ಅಪಪ್ರಚಾರ ನಡೆಸುತ್ತಿದೆ’ ಎಂದರು.

ಹರಿಯಾಣ ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿರುವ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಅವರು, ‘ಕಾಂಗ್ರೆಸ್‌ನವರು ಬಿಜೆಪಿ ಸರ್ಕಾರದ ವಿರುದ್ಧ ಶೇ 40 ಲಂಚ ಆರೋಪ ಮಾಡಿದ್ದರು. ಕಾಂಗ್ರೆಸ್ ಸರ್ಕಾರದಲ್ಲಿ ಶೇ 40ರಷ್ಟು ಲಂಚ ಇದೆ ಎಂದು ತುಮಕೂರಿನ ಗುತ್ತಿಗೆದಾರರೇ ಹೇಳಿದ್ದಾರಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.