ಬೆಂಗಳೂರು: ಗೆಜೆಟೆಡ್ ಪ್ರೊಬೆಷನರಿ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಹುದ್ದೆ ಭರ್ತಿಗೆ ನಡೆಯುವ ಪೂರ್ವಭಾವಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಮಂಗಳವಾರ (ಆಗಸ್ಟ್ 27) ಜಿಲ್ಲಾ, ತಾಲ್ಲೂಕು ಕೇಂದ್ರಗಳಿಂದ ಹೆಚ್ಚುವರಿ ಬಸ್‌ಗಳನ್ನು ಓಡಿಸಲು ಕೆಎಸ್‌ಆರ್‌ಟಿಸಿ ನಿರ್ಧರಿಸಿದೆ.

ಬಸ್ ವ್ಯವಸ್ಥೆ ಕಲ್ಪಿಸುವಂತೆ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ‘ಎಕ್ಸ್’ ಖಾತೆ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿರುವ ಕೆಎಸ್‌ಆರ್‌ಟಿಸಿ ನಗರದ ಸುತ್ತಮುತ್ತಲಿನ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಇನ್ನಿತರ ಜಿಲ್ಲಾ ಕೇಂದ್ರಗಳಿಂದ, ವಿವಿಧ ತಾಲ್ಲೂಕು ಕೇಂದ್ರಗಳಿಂದ ಪರೀಕ್ಷಾ ಕೇಂದ್ರಗಳಿಗೆ ಹೆಚ್ಚುವರಿ ಬಸ್ ಓಡಿಸಲಿದೆ ಎಂದು ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.