ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿ ಎಂಬುದು ಖಚಿತವಾಗಿದ್ದರಿಂದ ನಾಗಪುರದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಹೆಡಗೇವಾರ್ ವಸ್ತುಸಂಗ್ರಹಾಲಯದ ಪ್ರವೇಶ ನಿರಾಕರಿಸಲಾಗಿದೆ. ಇದಕ್ಕೆ ಕಾರಣ ಏನು ಎಂಬುದನ್ನು ಸ್ಪಷ್ಟಪಡಿಸಬಲ್ಲಿರಾ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಮಾಜಿ ಶಾಸಕ ಗೂಳಿಹಟ್ಟಿ ಡಿ.ಶೇಖರ್ ಆಡಿಯೊ ಸಂದೇಶದಲ್ಲಿ ಪ್ರಶ್ನಿಸಿದ್ದಾರೆ. ನಾಗಪುರದ ಆರ್‌ಎಸ್‌ಎಸ್ ಕಚೇರಿ ಭೇಟಿಯ ಸಂದರ್ಭದಲ್ಲಿ ಉಂಟಾದ ಕಹಿ ಅನುಭವಕ್ಕೆ ಸಂಬಂಧಿಸಿದ ಹೇಳಿಕೆಯನ್ನು ಆಡಿಯೊ ರೂಪದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.