ಬೆಂಗಳೂರು: ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸಲಾಗಿದ್ದು, ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಕೆರೆಹಳ್ಳಿಯ ಪುನೀತ್, ನಗರದ ಜೆ.ಪಿ.ನಗರ 7ನೇ ಹಂತದಲ್ಲಿ ವಾಸವಿದ್ದ. ಪುನೀತ್ ವಿರುದ್ಧ ರಾಜ್ಯದ 11 ಠಾಣೆಗಳಲ್ಲಿ ಎಫ್ಐಆರ್ ದಾಖಲಾಗಿತ್ತು. ಕೆಲ ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿತ್ತು. ಅಪರಾಧ ಪ್ರಕರಣಗಳಲ್ಲಿ ಪದೇ ಪದೇ ಭಾಗಿಯಾಗುತ್ತಿರುವುದರಿಂದ ಪುನೀತ್ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಪುನೀತ್ ಬಂಧಿಸುವಂತೆ ಕಮಿಷನರ್ ಆದೇಶ ಹೊರಡಿಸಿದ್ದರು. ನಂತರ, ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿತ್ತು.

ಬಂಧನ ಆದೇಶವನ್ನು ಪುನೀತ್ ಪ್ರಶ್ನಿಸಿದ್ದರು. ಇದರ ವಿಚಾರಣೆಗಾಗಿ ಸರ್ಕಾದ ಸಲಹಾ ಸಮಿತಿ ರಚಿಸಿತ್ತು.

ವಿಚಾರಣೆ ನಡೆಸಿದ್ದ ಸಮಿತಿ, 'ಬಂಧಿಯನ್ನು ಬಂಧನದಲ್ಲಿಡಲು ಸಾಕಷ್ಟಿದೆ ಕಾರಣಗಳಿಲ್ಲ' ಎಂದು ಅಭಿಪ್ರಾಯಪಟ್ಟು ವರದಿ ನೀಡಿದೆ.

ವರದಿಯನ್ವಯ ಆದೇಶ ಹೊರಡಿಸಿರುವ ಸರ್ಕಾರ, ಕಮಿಷನರ್ ಆದೇಶವನ್ನು ರದ್ದುಪಡಿಸಿದೆ. ಪುನೀತ್ ಬಂಧನಮುಕ್ತಗೊಳಿಸುವಂತೆ ಸೂಚಿಸಿದೆ. ಇದರ ಬೆನ್ನಲ್ಲೇ ಪುನೀತ್‌ನನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ಗೂಂಡಾ ಕಾಯ್ದೆಯಡಿ ದಾಖಲಾದ ಪ್ರಕರಣವನ್ನು ರದ್ದುಪಡಿಸಿದ ಮೊದಲ ಪ್ರಕರಣ ಇದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.