ಬೆಂಗಳೂರು: ಸರ್ಕಾರಿ ಪದವಿ ಕಾಲೇಜಿನತರಗತಿಗಳ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಮತ್ತೊಮ್ಮೆ ಬದಲಿಸಿದೆ. ಬೆಳಿಗ್ಗೆ 9 ರಿಂದ 10ರ ಮಧ್ಯದಲ್ಲಿ ತರಗತಿಗಳನ್ನು ಆರಂಭಿಸುವಂತೆ ಸುತ್ತೋಲೆ ಹೊರಡಿಸಿದೆ. ವರ್ಷದೊಳಗೆ ಈ ಕುರಿತು ಹೊರಡಿಸಿರುವ 3ನೇ ಸುತ್ತೋಲೆ ಇದಾಗಿದೆ.

ಈ ಹಿಂದೆ ಬೆಳಿಗ್ಗೆ 8 ಗಂಟೆಯಿಂದಲೇ ತರಗತಿಗಳನ್ನು ಆರಂಭಿಸಬೇಕೆಂದು ಶಿಕ್ಷಣ ಇಲಾಖೆ ಸೂಚಿಸಿತ್ತು. ಆದರೆ, ವಿದ್ಯಾರ್ಥಿಗಳು ಹಾಗೂ ಕಾಲೇಜು ಸಿಬ್ಬಂದಿ ಪ್ರತಿಭಟನೆ ನಡೆಸಿದಕಾರಣ ಅದನ್ನು 9 ಗಂಟೆಗೆ ಬದಲಿಸಿತು. ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆಯಲ್ಲಿ ತೊಂದರೆಯಾಗುತ್ತಿರುವ ಬಗ್ಗೆ ಮನವಿಗಳು ಬಂದಿದ್ದರಿಂದ ಈಗ ಮತ್ತೊಮ್ಮೆ ಇಲಾಖೆ ವೇಳಾಪಟ್ಟಿ ಬದಲಾವಣೆ ಮಾಡಿದೆ.

ಸುತ್ತೋಲೆಯಲ್ಲಿ ಏನಿದೆ? : ಈಗಾಗಲೇ 2 ಪಾಳಿಗಳಲ್ಲಿ ತರಗತಿಗಳನ್ನು ನಡೆಸುತ್ತಿರುವ ಕಾಲೇಜುಗಳಲ್ಲಿ ಬೆಳಿಗ್ಗೆಯ ಬ್ಯಾಚನ್ನು ಹಿಂದಿನಂತೆಯೇ ಬೆಳಿಗ್ಗೆ 8 ಗಂಟೆಗೆ ಪ್ರಾರಂಭಿಸಬೇಕು. ಪ್ರಯೋಗಾಲಯ ತರಗತಿಗಳನ್ನು ಬೆಳಿಗ್ಗೆ 8 ಗಂಟೆಗೆ ನಡೆಸಲು ಆದ್ಯತೆ ನೀಡಬೇಕು.

ಉಳಿದಂತೆ ವಿದ್ಯಾರ್ಥಿಗಳ ಹಾಜರಾತಿ ದೃಷ್ಟಿಯಿಂದ, ಅವರ ಸಾರಿಗೆ ವ್ಯವಸ್ಥೆಗೆ ಅನುಗುಣವಾಗಿ ಬೆಳಿಗ್ಗೆ 9 ರಿಂದ 10 ಗಂಟೆಯ ಮಧ್ಯದಲ್ಲಿ ತರಗತಿಗಳನ್ನು ಪ್ರಾರಂಭಿಸುವ ಬಗ್ಗೆ ಆಯಾ ಕಾಲೇಜಿನ ಪ್ರಾಂಶುಪಾಲರು ತೀರ್ಮಾನಿಸಬೇಕು ಎಂದು ಸೂಚಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.