ಬೆಂಗಳೂರು: ಕಲಬುರಗಿ ಸರ್ಕಾರಿ ಮಹಾವಿದ್ಯಾಲಯದ 3 ಎಕರೆ 7 ಗುಂಟೆ ಜಮೀನನ್ನು ಕರ್ನಾಟಕ ಪ್ರದೇಶ ಕುರುಬರ ಸಂಘದ ಕಲಬುರಗಿ ಶಾಖೆಗೆ ಮಂಜೂರು ಮಾಡಲು ಸರ್ಕಾರ ತೀರ್ಮಾನಿಸಿದೆ.

ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಪ್ರಸ್ತಾವಕ್ಕೆ ಅನುಮೋದನೆ ನೀಡಲಾಗಿದೆ.

‘ವಿದ್ಯಾರ್ಥಿಗಳ ಭವಿಷ್ಯದ ಶೈಕ್ಷಣಿಕ ಹಿತದೃಷ್ಟಿಯಿಂದ ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ), ಕಲಬುರಗಿಯ ಈ ಕಾಲೇಜಿಗೆ ಸೇರಿದ ಜಮೀನು ನೀಡಲು ಪ್ರಸ್ತಾವನೆ ಸಲ್ಲಿಕೆಯಾಗಿತ್ತು. ಪ್ರಸ್ತಾವನೆಯನ್ನು ಅಂಗೀಕರಿಸಲಾಗಿದೆ’ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ಹೇಳಿದ್ದಾರೆ.

* ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರವು ಹೊಸಪೇಟೆ ಇಂಗಳಗಿ ಗ್ರಾಮದ ವಿವಿಧ ಸರ್ವೆ ನಂಬರ್‌ಗಳಲ್ಲಿನ ಒಟ್ಟು 24 ಎಕರೆ 24 ಗುಂಟೆ ಜಮೀನಿನಲ್ಲಿ 50:50 ಅನುಪಾತದಲ್ಲಿ ಕೈಗೊಳ್ಳಲು ಉದ್ದೇಶಿಸಿರುವ ವಸತಿ ಯೋಜನೆಯ ₹11.76 ಕೋಟಿ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

*ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ಗೆ ನಬಾರ್ಡ್ ಮೂಲಕ ಪುನರ್ಧನ ಪಡೆಯಲು ₹1,600 ಕೋಟಿಗಳಿಗೆ ಖಾತರಿ ವಿಸ್ತರಿಸಲು ಒಪ್ಪಿಗೆ ನೀಡಿದೆ.

ರಾಜಮ್ಮ ಚೌಡರೆಡ್ಡಿಗೆ ಕಡ್ಡಾಯ ನಿವೃತ್ತಿ:

₹7 ಲಕ್ಷ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಕೆಎಎಸ್ ಅಧಿಕಾರಿ ರಾಜಮ್ಮ ಚೌಡರೆಡ್ಡಿ ಅವರನ್ನು ಸರ್ಕಾರಿ ಸೇವೆಯಿಂದ ಕಡ್ಡಾಯ ನಿವೃತ್ತಿಗೊಳಿಸಲು ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಇವರ ಮೇಲಿನ ಆರೋಪ ಸಾಬೀತಾಗಿರುವ ಕಾರಣ ಲೋಕಾಯುಕ್ತರ ಶಿಫಾರಸಿನಂತೆ ಕಡ್ಡಾಯ ನಿವೃತ್ತಿಗೊಳಿಸಲು ತೀರ್ಮಾನಿಸಲಾಗಿದೆ ಎಂದರು.

ಲಂಚ ಸ್ವೀಕಾರ ಪ್ರಕರಣದಲ್ಲಿ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದ ಸಹಾಯಕ ಔಷಧ ನಿಯಂತ್ರಕ ಗೋಪಾಲ ಎಚ್.ಭಂಡಾರೆ ಅವರನ್ನು ಸೇವೆಯಿಂದ ವಜಾಗೊಳಿಸಲು ಮತ್ತು ಔಷಧ ಪರಿವೀಕ್ಷಕ ಮಂಜುನಾಥ ಎಸ್.ಎಸ್ ಅವರನ್ನು ಸರ್ಕಾರಿ ಸೇವೆಯಿಂದ ಕಡ್ಡಾಯವಾಗಿ ನಿವೃತ್ತಿಗೊಳಿಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಪಾಟೀಲ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.