ಬೆಂಗಳೂರು: ಲೋಕಾಯುಕ್ತ, ಇಲಾಖಾ ವಿಚಾರಣೆ ಸೇರಿದಂತೆ ವಿವಿಧ ಆರೋಪಗಳನ್ನು ಹೊತ್ತಿರುವ 33 ಕ್ಷೇತ್ರ ಶಿಕ್ಷಣಾಧಿ ಕಾರಿಗಳನ್ನು ಸರ್ಕಾರ ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ವರ್ಗಾಯಿಸಿದೆ.

ಜತೆಗೆ ನಾಲ್ವರು ಶಿಕ್ಷಣಾಧಿ ಕಾರಿಗಳನ್ನೂ ವಿವಿಧ ಹುದ್ದೆ ಗಳಿಗೆ ವರ್ಗಾಯಿಸಲಾಗಿದೆ. ಎಕ್ಸಿಕ್ಯೂಟಿವ್ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ವಿರುದ್ಧ ಯಾವುದೇ ಆರೋಪಗಳು ಕೇಳಿಬಂದರೆ, ಅವರ ವಿರುದ್ಧ ತನಿಖೆ, ವಿಚಾರಣೆ ನಡೆಯುತ್ತಿದ್ದರೆ. ಅಂಥವರನ್ನು ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ವರ್ಗಾಯಿಸಬೇಕು ಎಂಬ ನಿಯಮದ ಅನ್ವಯ ಈ ವರ್ಗಾ ವಣೆ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತಿಳಿಸಿದೆ.

ಸೌಲಭ್ಯಕ್ಕೆ ತಂತ್ರಾಂಶ ಬಳಕೆ ಕಡ್ಡಾಯ: ಶಿಕ್ಷಕರ ಸೇವಾ ಸೌಲಭ್ಯ ಗಳನ್ನು ಶಿಕ್ಷಕ ಮಿತ್ರ ತಂತ್ರಾಂಶದ ಮೂಲಕ ಅನುಷ್ಠಾನಗೊಳಿಸವು ದನ್ನು ಕಡ್ಡಾಯಗೊಳಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಇಲಾಖೆಯಲ್ಲಿ 2.60 ಲಕ್ಷ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದು, ಅವರು ತಮಗೆ ಲಭ್ಯವಿರುವ ಸೌಲಭ್ಯಗಳನ್ನು ಪಡೆಯಲು ಪಾಠ ಮಾಡದೇ ಅನಗತ್ಯವಾಗಿ ಬಿಇಒ, ಡಿಡಿಪಿಐ ಕಚೇರಿಗಳಿಗೆ ಅಲೆಯುವುದನ್ನು ತಡೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.