ಬೆಂಗಳೂರು: ‘ಬೋಧನಾಧಾರಿತ ಕಲಿಕೆಗಿಂತ ಕೌಶಲಾಧಾರಿತ ಪಠ್ಯಕ್ರಮ ಇಂದಿನ ಅಗತ್ಯವಾಗಿದ್ದು, ಅದಕ್ಕೆ ಪೂರಕ ಪಠ್ಯಕ್ರಮವನ್ನು ಸಿದ್ಧಪಡಿಸುವ ಹಾದಿಯಲ್ಲಿ ಉನ್ನತ ಶಿಕ್ಷಣ ಇಲಾಖೆ ಸಿದ್ಧತೆ ನಡೆಸುತ್ತಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದರು.
.Bengaluru Tech Summit | ಚಂದ್ರಯಾನ ವೀಕ್ಷಣೆಗೆ ‘ಬಾಹ್ಯಾಕಾಶ’ ಸಂಚಾರ.
ಬೆಂಗಳೂರು ಟೆಕ್ ಸಮಿಟ್ನ 2ನೇ ದಿನವಾದ ಗುರುವಾರ ಆಯೋಜಿಸಲದ ಸ್ಟಾರ್ಟ್ಅಪ್ ಉತ್ಪನ್ನಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

’ಈ ನಿಟ್ಟಿನಲ್ಲಿ ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಮಂತ್ರಿ ಹಾಗೂ ಕೌಶಲಾಭಿವೃದ್ಧಿ ಮಂತ್ರಿಗಳೊಂದಿಗೆ ಸಂಪರ್ಕದಲ್ಲಿದ್ದು, ಕೈಗಾರಿಕೆಗಳಿಗೆ ಅಗತ್ಯವಿರುವ ಕೌಶಲಗಳನ್ನು ಯುವಜನತೆಗೆ ನೀಡುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ’ ಎಂದರು,

‘ಉದ್ಯಮಗಳ ಅಗತ್ಯಗಳಿಗೆ ಪೂರಕವಾಗಿ 6ರಿಂದ 8 ವಾರಗಳ ಸರ್ಟಿಫಿಕೇಟ್ ಕೋರ್ಸ್ಗಳನ್ನು ಪ್ರಾರಂಭಿಸುವ ಕುರಿತೂ ಚಿಂತನೆ ನಡೆದಿದೆ. ಇದರಿಂದ ಕೈಗಾರಿಕೆಗಳ ಬೇಡಿಕೆಗೆ ಅನುಗುಣವಾದ ಮಾನವ ಸಂಪನ್ಮೂಲವನ್ನು ಸಿದ್ಧಪಡಿಸಲಾಗುವುದು. ಆ ಮೂಲಕ ಉದ್ಯೋಗ ಪಡೆದವರು ಗೌರವಯುತ ಬದುಕುನ್ನು ನಡೆಸಲು ಸಾಧ್ಯವಾಗುವಂತ ಪರಿಸರವನ್ನು ಸೃಷ್ಟಿಸುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ’ ಎಂದು ಡಾ. ಸುಧಾಕರ್ ಹೇಳಿದರು.

‘ಈ ಎಲ್ಲಾ ಯೋಜನೆಗಳನ್ನು ತ್ವರಿತಗತಿಯಲ್ಲಿ ಜಾರಿಗೊಳಿಸುವ ಮೂಲಕ ಕರ್ನಾಟಕವು ತಂತ್ರಜ್ಞಾನ ಹಾಗೂ ಉತ್ಪಾದನೆಯಲ್ಲಿ ತನ್ನ ಅಗ್ರಸ್ಥಾನವನ್ನು ಕಾಯ್ದುಕೊಳ್ಳಲಿದೆ’ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರು ಟೆಕ್ ಸಮಿಟ್ನಲ್ಲಿ ಬಿಡುಗಡೆಯಾಗಲಿರುವ 35 ಸ್ಟಾರ್ಟ್ಅಪ್ ಉತ್ಪನ್ನಗಳಲ್ಲಿ 13 ಉತ್ಪನ್ನಗಳು ಈ ವೇದಿಕೆಯಲ್ಲಿ ಬಿಡುಗಡೆಗೊಂಡವು. ಐಟಿ ಹಾಗೂ ಬಿಟಿ ಸಚಿವ ಪ್ರಿಯಾಂಕ ಖರ್ಗೆ, ಇಲಾಖೆಯ ಕಾರ್ಯದರ್ಶಿ ಡಾ. ಏಕ್ರೂಪ್ ಕೌರ್, ಸ್ಟಾರ್ಟ್ಅಪ್ನ ವಿಷನ್ ಗ್ರೂಪ್ನ ಮುಖ್ಯಸ್ಥ ಪ್ರಶಾಂತ್ ಪ್ರಕಾಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.