ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ 4ನೇ ಶನಿವಾರವೂ ರಜೆ ನೀಡಲು ಸಚಿವ ಸಂಪುಟ ಉಪಸಮಿತಿ ಶಿಫಾರಸು ಮಾಡಿದೆ.

ಪ್ರಸ್ತುತ ಇರುವ ಸಾಂದರ್ಭಿಕ ರಜೆಗಳನ್ನು 15ರಿಂದ 12 ದಿನಗಳಿಗೆ ಇಳಿಸುವುದು. ಮಹಾವೀರ ಜಯಂತಿ, ಬಸವ ಜಯಂತಿ, ಮಹರ್ಷಿ ವಾಲ್ಮೀಕಿ ಜಯಂತಿ, ಕನಕ ಜಯಂತಿ, ಕಾರ್ಮಿಕರ ದಿನಾಚರಣೆ, ಗುಡ್‌ಫ್ರೈಡೇ, ಮಹಾಲಯ ಅಮಾವಾಸ್ಯೆ, ಈದ್–ಮಿಲಾದ್ ಹಬ್ಬಕ್ಕೆ ನೀಡುತ್ತಿದ್ದ ಸಾರ್ವತ್ರಿಕ ರಜೆಗಳನ್ನು ರದ್ದುಪಡಿಸುವಂತೆ ಶಿಫಾರಸು ಮಾಡಲಾಗಿದೆ.

ರಜೆ ರದ್ದುಪಡಿಸಿದ ಜಯಂತಿಗಳು ಹಾಗೂ ಧಾರ್ಮಿಕ ಹಬ್ಬಗಳನ್ನು ನಿರ್ಬಂಧಿತ ರಜೆಯಾಗಿ ಘೋಷಿಸುವುದು. ದೀಪಾವಳಿ ಹಬ್ಬಕ್ಕೆ 1ನೇ ಹಾಗೂ 3ನೇ ದಿನ ನೀಡುತ್ತಿದ್ದ 2 ದಿನಗಳ ರಜೆಯನ್ನು 1ನೇ ಮತ್ತು 2ನೇ ದಿನ ನೀಡುವಂತೆ ಶಿಫಾರಸು ಮಾಡಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಮುಂದಿನ ನಿರ್ಧಾರ ಕೈಗೊಳ್ಳಬೇಕಿದೆ.

ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಹಾಗೂ ಆಡಳಿತ ಸುಧಾರಣೆಗೆ ಶಿಫಾರಸು ನೀಡಲು ರಚಿಸಲಾಗಿದ್ದ 6ನೇ ವೇತನ ಆಯೋಗವು ತನ್ನ ವರದಿಯಲ್ಲಿ ನೌಕರರ ಕೆಲಸದ ದಿನಗಳು ಹಾಗೂ ರಜಾ ದಿನಗಳನ್ನು ಪರಿಷ್ಕರಿಸುವಂತೆ ಶಿಫಾರಸು ಮಾಡಿತ್ತು. ಇದರ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಬೈರೇಗೌಡ ನೇತೃತ್ವದಲ್ಲಿ ಸಚಿವ ಸಂಪುಟ ಉಪಸಮಿತಿ ರಚಿಸಲಾಗಿತ್ತು.

‘ಪ್ರತಿ ತಿಂಗಳ 4ನೇ ಶನಿವಾರವೂ ರಜೆ ನೀಡಿದರೆ ನೌಕರರಿಗೆ ಸಾಕಷ್ಟು ಸಹಕಾರಿಯಾಗಲಿದೆ. ಬ್ಯಾಂಕ್‌ಗಳು ಸಹ ರಜೆ ನೀಡುತ್ತಿವೆ. ಈಗಾಗಲೇ 2ನೇ ಶನಿವಾರ ರಜೆ ನೀಡಲಾಗುತ್ತಿದೆ. 4ನೇ ಶನಿವಾರ ರಜೆ ನೀಡಿದರೆ ಒಂದು ತಿಂಗಳಲ್ಲಿ ಎರಡು ಬಾರಿ ಒಟ್ಟಾಗಿ ಎರಡು ದಿನಗಳ ಕಾಲ ರಜೆ ಸಿಕ್ಕಂತಾಗುತ್ತದೆ. ಇದರಿಂದ ನೌಕರರ ತೃಪ್ತಿಯ ಮಟ್ಟ ಹೆಚ್ಚಲಿದ್ದು, ಕಾರ್ಯಕ್ಷಮತೆಯಲ್ಲಿ ಸಕಾರಾತ್ಮಕ ಬದಲಾವಣೆ ಆಗಲಿದೆ’ ಎಂದು ವರದಿಯಲ್ಲಿ ಪ್ರಸ್ತಾಪಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.