ಬೆಳಗಾವಿ: ಅಡಿಕೆ ತೋಟಗಳನ್ನು ಬಾಧಿಸುತ್ತಿರುವ ಎಲೆ ಚುಕ್ಕಿ ರೋಗ ಮತ್ತು ಹಳದಿ ಎಲೆ ರೋಗಗಳ ಕುರಿತು ಸಂಶೋಧನೆ ನಡೆಸಲು ಅಗತ್ಯವಿರುವಷ್ಟು ಅನುದಾನವನ್ನು ಒಗದಿಸಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಭರವಸೆ ನೀಡಿದರು.

ಬುಧವಾರ ವಿಧಾನಸಭೆಯ ಶೂನ್ಯ ವೇಳೆಯಲ್ಲಿ ಬಿಜೆಪಿಯ ಆರಗ ಜ್ಞಾನೇಂದ್ರ ಅವರು ಮಾಡಿದ ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವರು, ‘ಈಗ ₹ 53 ಲಕ್ಷ ಅನುದಾನವನ್ನು ಎಲೆ ಚುಕ್ಕಿ ಮತ್ತು ಹಳದಿ ಎಲೆ ರೋಗದ ಕುರಿತ ಸಂಶೋಧನೆಗೆ ಒದಗಿಸಲಾಗಿದೆ. ಇನ್ನು ಅಗತ್ಯವಿರುವ ಪೂರ್ಣ ಪ್ರಮಾಣದ ಅನುದಾನ ಒದಗಿಸಲು ಸರ್ಕಾರ ಬದ್ಧವಾಗಿದೆ’ ಎಂದರು.

ಬಿಜೆಪಿ ನೇತೃತ್ವದ ಹಿಂದಿನ ಸರ್ಕಾರ ಎಲೆ ಚುಕ್ಕಿ ಮತ್ತು ಹಳದಿ ಎಲೆ ರೋಗಗಳ ಕುರಿತ ಸಂಶೋಧನೆಗೆ ₹ 10 ಕೋಟಿ ಅನುದಾನ ಘೋಷಿಸಿತ್ತು. ಕಾಂಗ್ರೆಸ್ ನೇತೃತ್ವದ ಈಗಿನ ಸರ್ಕಾರವು ಬಜೆಟ್‌ನಲ್ಲಿ ಪ್ರಕಟಿಸಿಲ್ಲ. ಸರ್ಕಾರಿ ಸಂಶೋಧನಾ ಕೇಂದ್ರಗಳ ಜತೆ ಖಾಸಗಿ ಪ್ರಯೋಗಾಲಯಗಳು ಮತ್ತು ಸಂಶೋಧನಾ ಕೇಂದ್ರಗಳನ್ನೂ ಈ ಉದ್ದೇಶಕ್ಕೆ ಬಳಸಿಕೊಳ್ಳಬೇಕು ಎಂದು ಜ್ಞಾನೇಂದ್ರ ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.