ಬೆಂಗಳೂರು: ಯಲಹಂಕದ ವಾಯುನೆಲೆಯಲ್ಲಿ ನಡೆಯುತ್ತಿರುವ 'ಏರೊ ಇಂಡಿಯಾ 2021’ ರಲ್ಲಿ ಭಾಗವಹಿಸುವುದಕ್ಕೆ ಕೋವಿಡ್ ಪರೀಕ್ಷೆ ಯಲ್ಲಿ ಸೋಂಕು ಇಲ್ಲ ಎಂಬ ಪ್ರಮಾಣಪತ್ರ ಹೊಂದಿರಬೇಕು ಎಂಬ ನಿಯಮವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.

ಈ ವೈಮಾನಿಕ ಪ್ರದರ್ಶನ ಪ್ರದೇಶದಲ್ಲಿ ಪ್ರವಾಸಿಗರು ಪರಸ್ಪರ ಅಂತರ ಕಾಪಾಡುವುದಕ್ಕೆ ಅನುಕೂಲಕರವಾಗಿ ಆಸನ ವ್ಯವಸ್ಥೆ ಮಾಡಲಾಗಿದೆ. ಕೋವಿಡ್ ಹರಡದಂತೆ ತಡೆಯಲು ಸಾಕಷ್ಟು ಮುನ್ನೆಚ್ಚರಿಕೆ ವಹಿಸಲಾಗಿದೆ. ಹಾಗಾಗಿ ಪ್ರದರ್ಶನಕ್ಕೆ ಬರುವವರು ಕೋವಿಡ್ ಸೋಂಕು ಹೊಂದಿಲ್ಲ ಎಂಬ ಪ್ರಮಾಣಪತ್ರ ಹೊಂದಿರಬೇಕಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಆದೇಶ ಮಾಡಿದೆ.

ಕೋವಿಡ್ ಸೋಂಕಿಲ್ಲ ಎಂಬ ಪ್ರಮಾಣಪತ್ರ ಕಡ್ಡಾಯ ಮಾಡಿದ್ದರಿಂದ ವೈಮಾನಿಕ ಪ್ರದರ್ಶನ ವೀಕ್ಷಣೆಗೆ ಬರುವವರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿತ್ತು. ಎರಡನೇ ದಿನವೂ ಸೀಮಿತ ಸಂಖ್ಯೆಯ ಪ್ರೇಕ್ಷಕರಿದ್ದರು.

ಪ್ರತಿ ಬಾರಿಯೂ ಜನರಿಂದ ಗಿಜಿಗುಡುತ್ತಿದ್ದ ಪ್ರದರ್ಶನದ ಪ್ರದೇಶ ಈ ಬಾರಿ ಖಾಲಿ ಹೊಡೆಯುತ್ತಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.