ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಈ ಕುರಿತಂತೆ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಕಲಬುರಗಿ ಪೀಠದಿಂದ ವಿಡಿಯೊ ಕಾನ್ಫರೆನ್ಸ್ ಮೂಲಕ ಪ್ರಕಟಿಸಿತು.

ಪ್ರಕರಣದ 5ನೇ ಆರೋಪಿ ಅಮಿತ್ ದಿಗ್ವೇಕರ್ ಅಲಿಯಾಸ್ ಅಮಿತ್ ಅಲಿಯಾಸ್ ಪ್ರದೀಪ್ ಮಹಾಜನ್, 7ನೇ ಆರೋಪಿ ಎಚ್.ಎಲ್.ಸುರೇಶ್ ಅಲಿಯಾಸ್ ಟೀಚರ್, 17ನೇ ಆರೋಪಿ ಕೆ.ಟಿ.ನವೀನ್ ಕುಮಾರ್ ಅಲಿಯಾಸ್ ನವೀನ್ ಜಾಮೀನು ಪಡೆದಿದ್ದಾರೆ.

ಅರ್ಜಿದಾರರ ಪರ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್ ವಾದ ಮಂಡಿಸಿದ್ದರು.

ಈ ಮೊದಲು 11ನೇ ಆರೋಪಿ ಮೋಹನ್ ನಾಯಕ್ ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಈ ಆದೇಶವನ್ನು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಮೂಲಕ ಪ್ರಶ್ನಿಸಿದ್ದು ಅರ್ಜಿ ವಿಚಾರಣೆಗೆ ಬಾಕಿ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.