ಭಾನುವಾರ, 17 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅರ್ಥಿಕ ಅಪರಾಧಕ್ಕೆ ಗ್ರಾ.ಪಂ ಅಧ್ಯಕ್ಷರೂ ಹೊಣೆ: ಗ್ರಾಮೀಣಾಭಿವೃದ್ಧಿ ಇಲಾಖೆ

ನಡಾವಳಿ ಸಿದ್ಧ l ಜಿ.ಪಂ ಸಿಇಒಗಳಿಂದ ವರದಿ ಕೇಳಿದ ಇಲಾಖೆ
Published : 6 ಆಗಸ್ಟ್ 2024, 23:40 IST
Last Updated : 6 ಆಗಸ್ಟ್ 2024, 23:40 IST
ಫಾಲೋ ಮಾಡಿ
Comments
ಸಮಾನ ಶಿಕ್ಷೆಗೆ ಪಿಡಿಒಗಳ ಒತ್ತಡ
ಗ್ರಾಮ ಪಂಚಾಯಿತಿ ಆರ್ಥಿಕ ವ್ಯವಹಾರಗಳಿಗೆ ಹೊಣೆಗಾರರಾದರೂ ಪಿಡಿಒಗಳ ಮೇಲೆ ಮಾತ್ರ ಕ್ರಮ ಜರುಗಿಸಲಾಗುತ್ತಿದೆ. ಇದು ನ್ಯಾಯಸಮ್ಮತವಲ್ಲ. ಹೆಚ್ಚಿನ ಪ್ರಕರಣಗಳಲ್ಲಿ ಜನಪ್ರತಿನಿಧಿಗಳ ಒತ್ತಡದಿಂದಲೇ ಹಣಕಾಸಿನ ಅವ್ಯವಹಾರಗಳು ನಡೆಯುತ್ತಿವೆ. ಹಾಗಾಗಿ, ಅವರನ್ನೂ ಹೊಣೆಗಾರರನ್ನಾಗಿ ಮಾಡಬೇಕು. ಕಾನೂನು ಪ್ರಕಾರ ಅವರನ್ನೂ ಶಿಕ್ಷೆಗೆ ಒಳಪಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಇದೇ ಮೇನಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಪಿಡಿಒಗಳ ಜೊತೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರೂ ಆರ್ಥಿಕ ವ್ಯವಹಾರಗಳಿಗೆ ಸಹಿ ಮಾಡುವ ಅಧಿಕಾರ ಹೊಂದಿದ್ದಾರೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಗೃಹ, ವಾಣಿಜ್ಯ ಕಟ್ಟಡ ಕಾಮಗಾರಿಗಳು, ಕೈಗಾರಿಕೆ, ಗಣಿಗಾರಿಕೆ, ಅಂಗಡಿ, ಹೋಟೆಲ್‌ ಮತ್ತಿತರ ವಾಣಿಜ್ಯ ವಹಿವಾಟುಗಳ ಆರಂಭಕ್ಕೆ ಪರವಾನಗಿ, ಇ–ಸ್ವತ್ತು (ನಮೂನೆ–9, 11ಎ, 11ಬಿ) ನೀಡುವ ಕುರಿತು ಗ್ರಾಮ ಪಂಚಾಯಿತಿ ಸದಸ್ಯರ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುತ್ತಿದೆ. ಹಾಗಾಗಿ, ಕೆಲ ಅಪರಾಧಗಳಲ್ಲಿ ಸದಸ್ಯರೂ ಹೊಣೆಗಾರಿಕೆ ಹೊಂದಿದ್ದಾರೆ ಎಂದು ಸಂಘ ವಿವರಿಸಿತ್ತು.
ಆರ್ಥಿಕ ಅಪರಾಧಕ್ಕೆ ಚುನಾಯಿತ ಪ್ರತಿನಿಧಿಗಳನ್ನೂ ಹೊಣೆ ಮಾಡಿದರೆ ಒತ್ತಡ ಕಡಿಮೆಯಾಗುತ್ತದೆ. ಪಿಡಿಒಗಳ ಆತ್ಮಹತ್ಯೆ ತಡೆಗೂ ಸಹಕಾರಿಯಾಗುತ್ತದೆ. ಸಂಘದ ಮನವಿಗೆ ಸರ್ಕಾರ ಸ್ಪಂದಿಸಿದೆ
ರಾಜು ವಾರದ, ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT