ಬೆಂಗಳೂರು: ಅಧಿಕಾರಿಗಳಿಂದ ಸ್ಪಷ್ಟ ಭರವಸೆ ಸಿಗದ ಕಾರಣ, ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಗ್ರಾಮ ಪಂಚಾಯಿತಿ ಅಧಿಕಾರಿಗಳು, ನೌಕರರು ಮತ್ತು ಸದಸ್ಯರು, ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಸುತ್ತಿದ್ದ ಮುಷ್ಕರವನ್ನು ಶನಿವಾರ ಸ್ಥಗಿತಗೊಳಿಸಿ, ರಾಜ್ಯದ 31 ಜಿಲ್ಲಾ ಪಂಚಾಯಿತಿ ಕಚೇರಿಗಳ ಎದುರು ಸೋಮವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಿದರು.

ಜಿಟಿಜಿಟಿ ಮಳೆಯ ನಡುವೆಯೂ ಧರಣಿಯಲ್ಲಿ ಪಾಲ್ಗೊಂಡಿದ್ದ ಗ್ರಾಮ ಪಂಚಾಯಿತಿ ಅಧಿಕಾರಿಗಳು, ನೌಕರರ ಮತ್ತು ಸದಸ್ಯರನ್ನು ಪಂಚಾಯತ್ ರಾಜ್ ಆಯುಕ್ತಾಲಯದ ಉಪ ನಿರ್ದೇಶಕ ಎಂ.ಚಂದ್ರಪ್ಪ ಅವರು ಭೇಟಿ ಮಾಡಿ ಮನವಿ ಸ್ವೀಕರಿಸಿದರು.

ಈ ನಡುವೆ ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ ಹಾಗೂ ಹೂವಿನಹಡಗಲಿ ಕ್ಷೇತ್ರದ ಶಾಸಕ ಕೃಷ್ಣ ನಾಯ್ಕ ಅವರು ಮುಷ್ಕರ ನಿರತರನ್ನು ಭೇಟಿ ಮಾಡಿ, ಹೋರಾಟಕ್ಕೆ ಬೆಂಬಲ ಸೂಚಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್ ಅವರು, ಹೋರಾಟದ ನೇತೃತ್ವದ ವಹಿಸಿದ್ದವರ ಜೊತೆ ಶುಕ್ರವಾರ ನಡೆಸಿದ ಸಭೆ ಫಲಪ್ರದವಾಗಿರಲಿಲ್ಲ. ಹಾಗಾಗಿ ನೌಕರರು ಶನಿವಾರವೂ ಮುಷ್ಕರ ಮುಂದುವರಿಸಿದ್ದರು.

ರಾಜ್ಯ ಬಿಲ್ ಕಲೆಕ್ಟರ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ನಾರಾಯಣ ಮಾತನಾಡಿ, ‘ಬೇಡಿಕೆ ಈಡೇರಿಸುವ ಸ್ಪಷ್ಟ ಭರವಸೆ ನೀಡದ ಕಾರಣ ಬೆಂಗಳೂರಿನಲ್ಲಿ ಮುಷ್ಕರ ಅಂತ್ಯಗೊಳಿಸಿ, ಸೋಮವಾರದಿಂದ ಗ್ರಾಮ ಪಂಚಾಯಿತಿ ಕಚೇರಿಗಳನ್ನು ಬಂದ್ ಮಾಡಿ, ಆಯಾ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು’ ಎಂದರು.

ಒಕ್ಕೂಟದ ಅಧ್ಯಕ್ಷ ರಾಜು ವಾರದ ‘ಅಕ್ಟೋಬರ್ 10ರಂದು ಬೆಂಗಳೂರಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಭೆ ಕರೆದಿದ್ದಾರೆ. ಅಲ್ಲಿಯವರೆಗೂ ಜಿಲ್ಲಾ ಕೇಂದ್ರದಲ್ಲಿ ಮುಷ್ಕರ ನಡೆಯಲಿದೆ. ಹೋರಾಟದ ನೇತೃತ್ವ ವಹಿಸಿರುವವರು ಮಾತ್ರ 10ರಂದು ಸಚಿವರ ಸಭೆಯಲ್ಲಿ ಭಾಗವಹಿಸುತ್ತಾರೆ. ಉಳಿದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿರುತ್ತಾರೆ’ ಎಂದು ತಿಳಿಸಿದರು.

ರಾಜ್ಯದ ವಿವಿಧ ಜಿಲ್ಲೆಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಕರ ವಸೂಲಿಗಾರರು, ಗುಮಾಸ್ತರು ಮತ್ತು ಡಾಟಾ ಎಂಟ್ರಿ ಅಪರೇಟರ್ಗಳು, ನೀರಗಂಟಿಗಳು, ಜವಾನರು, ಸ್ವಚ್ಛತಾ ಕೆಲಸಗಾರರು, ದ್ವಿತೀಯ ದರ್ಜೆ ಸಹಾಯಕರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗೆಜೆಟೆಡ್ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿ ಸದಸ್ಯರು ಧರಣಿಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.