ಬೆಳಗಾವಿ: ಗ್ರಾನೈಟ್ ಗಣಿಗಾರಿಕೆಗೆ ಸಂಬಂಧಿಸಿದಂತೆ ರಾಜ್ಯಕ್ಕೆ ರಾಜಧನ ನಷ್ಟ ಆಗದಂತೆ ಉದ್ಯಮಿಗಳಿಗೆ ಪರವಾನಗಿ ನೀಡುವ ಪ್ರಕ್ರಿಯೆ ಸರಳಗೊಳಿಸುವಂತೆ ಗಣಿ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸೂಚಿಸಿದರು.

ಗ್ರಾನೈಟ್ ಗಣಿಗಾರಿಕೆ ಉದ್ಯಮ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸುವರ್ಣಸೌಧದಲ್ಲಿ ಗುರುವಾರ ಚರ್ಚೆ ನಡೆಯಿತು.

ಸಂಬಂಧಪಟ್ಟ ಪ್ರದೇಶಗಳ ವ್ಯಾಪ್ತಿಯ ಶಾಸಕರು ಸಭೆಯಲ್ಲಿ ನೀಡಿದ ಸಲಹೆಗಳನ್ನು ಪರಿಗಣಿಸಿ, ಗ್ರಾನೈಟ್ ಉದ್ಯಮ ಎದುರಿಸುತ್ತಿರುವ ಸವಾಲುಗಳನ್ನು ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಗಣಿ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ ಮಾತನಾಡಿ, ‘ಈಗಾಗಲೇ ಪರವಾನಗಿ ನೀಡುವ ಸಂಬಂಧ ಕಾನೂನು ಪ್ರಕ್ರಿಯೆ ಸರಳಗೊಳಿಸಲು ನೆರೆ ರಾಜ್ಯಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಲಾಗಿದ್ದು, ವರದಿಯೂ ಸಲ್ಲಿಕೆಯಾಗಿದೆ. ಶೀಘ್ರವೇ ಈ ಕುರಿತು ಕ್ರಮ ಕೈಗೊಳ್ಳಲಾಗುವುದು’ ಎಂದು ವಿವರಿಸಿದರು.

ಉದ್ಯಮ ಎದುರಿಸುತ್ತಿರುವ ಸಮಸ್ಯೆ ಪರಿಹರಿಸಲು, ಅದರಲ್ಲೂ ಮುಖ್ಯವಾಗಿ ಪಟ್ಟಾ ಭೂಮಿಯಲ್ಲಿ ಪರವಾನಗಿ ಪಡೆಯುವಾಗ ಎದುರಿಸುವ ಸಮಸ್ಯೆ ನಿವಾರಿಸುವಂತೆ ಉದ್ಯಮಿಗಳು ಮುಖ್ಯಮಂತ್ರಿಗೆ ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.