ಬೆಂಗಳೂರು: ‘ಗೃಹಲಕ್ಷ್ಮಿ’ ಯೋಜನೆ ಆಗಸ್ಟ್ ತಿಂಗಳಿನಿಂದ ಜಾರಿ ಬರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರ ಜತೆ ಶುಕ್ರವಾರ ನಡೆದ ಸಭೆಯ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

‘ಈ ಯೋಜನೆಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ರೂಪುರೇಷೆ ಸಿಗಲಿದೆ. ಈ ಯೋಜನೆ ಜಾರಿಗೆ ಪ್ರತ್ಯೇಕ ಆ್ಯಪ್ ಈಗಾಗಲೇ ತಯಾರಾಗಿದ್ದು, ಈ ಕುರಿತು ಸಿಎಂ ಜತೆ ಚರ್ಚೆ ನಡೆಸಲಾಗುವುದು. ಅಲ್ಲದೇ, ಇದಕ್ಕೆ ಯಾವ ದಿನದಿಂದ ಅರ್ಜಿ ಸ್ವೀಕಾರ ಮಾಡಬೇಕು ಮುಖ್ಯಮಂತ್ರಿ ಗಮನಕ್ಕೆ ತಂದು ನಿರ್ಧಾರ ಮಾಡುತ್ತೇವೆ’ ಎಂದು ಹೇಳಿದರು.

‘ಸೇವಾಸಿಂಧು ಸರ್ವರ್ ಓವರ್‌ಲೋಡ್ ಆಗುತ್ತಿದ್ದು, ಅಪ್‌ಡೇಟ್ ಆದರೂ ಸಮಸ್ಯೆ ಆಗುತ್ತಿದೆ. ಇದಕ್ಕೆಲ್ಲಾ ಆ್ಯಪ್‌ನಲ್ಲಿ ಪರಿಹಾರ ಸಿಗಲಿದೆ. ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಅವರಿಗೆ ಆ್ಯಪ್ ತೋರಿಸಿ, ಅಂತಿಮ ದಿನ ಘೋಷಣೆ ಮಾಡುತ್ತೇವೆ’ ಎಂದು ಹೆಬ್ಬಾಳಕರ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.