ಬೆಂಗಳೂರು: ಗೃಹಜ್ಯೋತಿಗೆ ಆ.1ರಂದು ಕಲಬುರಗಿಯಲ್ಲಿ, ಗೃಹಲಕ್ಷ್ಮಿಗೆ ಆ.17 ಅಥವಾ 18ರಂದು ಬೆಳಗಾವಿಯಲ್ಲಿ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಯೋಜನೆಗಳ ಅನುಷ್ಠಾನ ಕುರಿತು ಉನ್ನತಮಟ್ಟದ ಸಭೆ ನಡೆಸಿದ ನಂತರ ಅವರು ಮಾತನಾಡಿದರು.

‘ಗ್ಯಾರಂಟಿ’ ಯೋಜನೆಗಳ ಜಾರಿಗೆ ಷರತ್ತುಗಳನ್ನು ವಿಧಿಸಲಾಗುತ್ತಿದೆ ಎಂಬ ಆರೋಪದಲ್ಲಿ ಸತ್ಯಾಂಶವಿಲ್ಲ. ಗೃಹಜ್ಯೋತಿಯನ್ನು ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವ ಎಲ್ಲರಿಗೂ ಅನ್ವಯಿಸಲಾಗುವುದು. ಅನಗತ್ಯ ದಾಖಲೆ ಸಂಗ್ರಹಕ್ಕೆ ಕಡಿವಾಣ ಹಾಕುವಂತೆ ಸೂಚಿಸಲಾಗಿದೆ. ತಾವು ನೆಲೆಸಿರುವ ಮನೆಯ ದೃಢೀಕರಣದ ಯಾವುದಾದರೂ ದಾಖಲೆ ನೀಡಿದರೂ ಸಾಕು. ಗ್ರಾಹಕರ ಸಹಾಯಕ್ಕಾಗಿ ಕೆಪಿಟಿಸಿಎಲ್‌ನ ಎಲ್ಲ ಕಚೇರಿಗಳಲ್ಲಿ ಸಹಾಯವಾಣಿ ಕೇಂದ್ರ ಸ್ಥಾಪಿಸಲಾಗುವುದು. ಹಳೆಯ ವಿದ್ಯುತ್ ಬಿಲ್ ಪಾವತಿಗೆ ಸೆ.30ರವರೆಗೆ ಅವಕಾಶ ನೀಡಲಾಗುವುದು ಎಂದರು.

ಘೋಷಿರುವ ಗ್ಯಾರಂಟಿ ಯೋಜನೆಗಳಿಗಾಗಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅತ್ಯಂತ ಸರಳಗೊಳಿಸಲಾಗಿದೆ. ಪ್ರತಿ ನಾಡ ಕಚೇರಿಯಲ್ಲೂ ಪ್ರತ್ಯೇಕ ಕೌಂಟರ್ ತೆರೆಯಲಾಗುವುದು. ಸಕಾರಣವಿಲ್ಲದೆ ಯಾವುದೇ ಅರ್ಜಿ ತಿರಸ್ಕರಿಸಬಾರದು. ತಿರಸ್ಕರಿಸಿದ ಪ್ರತಿ ಅರ್ಜಿಗೂ ಸೂಕ್ತ ವಿವರಣೆ ನೀಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಸೀಮಿತ ಅವಧಿಯಲ್ಲಿ ಅಧಿಕ ಸಂಖ್ಯೆಯ ಅರ್ಜಿಗಳು ಸಲ್ಲಿಕೆಯಾಗುವ ಕಾರಣ ಅಪಾರ ಪ್ರಮಾಣದ ದತ್ತಾಂಶ ಸಲ್ಲಿಕೆಗೆ ಅನುಗುಣವಾಗಿ ಸೇವಾ ಸಿಂಧು ಪೋರ್ಟಲ್ ಸಾಮರ್ಥ್ಯ ಹೆಚ್ಚಿಸುವಂತೆ ಇ-ಆಡಳಿತ ಇಲಾಖೆಯ ಅಧಿಕಾರಿಗಳು ನಿಗಾವಹಿಸಲಿದ್ದಾರೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.