ಬೆಂಗಳೂರು: ‘ಚಿಟ್ ಫಂಡ್‌ಗಳ ಮೇಲೆ ಕೇಂದ್ರ ಸರ್ಕಾರ ಶೇ 18ರಷ್ಟು ಜಿಎಸ್‌ಟಿ (ಸರಕು ಮತ್ತು ಸೇವಾ ತೆರಿಗೆ) ವಿಧಿಸುತ್ತಿರುವುದು ಖಂಡನೀಯ. ಕೂಡಲೇ ತೆರಿಗೆ ವಿನಾಯಿತಿ ನೀಡಬೇಕು. ಇಲ್ಲವಾದರೆ ಹೋರಾಟದ ಬಗ್ಗೆ ಚಿಂತನೆ ನಡೆಸಲಾಗುವುದು’ ಎಂದು ಕರ್ನಾಟಕ ಚಿಟ್‌ಸ್ಟರ್ಸ್ ಒಕ್ಕೂಟದ ಪದಾಧಿಕಾರಿಗಳು ಎಚ್ಚರಿಸಿದರು.

ನಗರದಲ್ಲಿ ಶನಿವಾರ ಆಯೋಜಿಸಿದ್ದ ‘ಚಿಟ್ ಫಂಡ್ ಉತ್ಸವ–2023’ ಕಾರ್ಯಕ್ರಮದಲ್ಲಿ ಪದಾಧಿಕಾರಿಗಳು ಎಂಟು ಪ್ರಮುಖ ನಿರ್ಣಯ ತೆಗೆದುಕೊಂಡರು.

‘ಚಿಟ್ ಫಂಡ್‌ಗಳ ನೋಂದಣಿ ಹಾಗೂ ಇತರೆ ಪ್ರಕ್ರಿಯೆಗಳಿಗೆ ಆನ್‌ಲೈನ್ ವ್ಯವಸ್ಥೆ ರೂಪಿಸಬೇಕು. ಚಿಟ್ ಫಂಡ್ಸ್ ಕಾಯ್ದೆಯನ್ನು ಸದ್ಯದ ಮಾರುಕಟ್ಟೆ ಸ್ಥಿತಿಗತಿಗಳಿಗೆ ತಕ್ಕಂತೆ ತಿದ್ದುಪಡಿ ಮಾಡಬೇಕು. ರಾಜ್ಯದಲ್ಲಿ ನೋಂದಣಿಯಾಗದ ಹಲವು ಚಿಟ್ ಫಂಡ್ ಕಂಪನಿಗಳಿದ್ದು, ಅವುಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಪದಾಧಿಕಾರಿಗಳು ಒತ್ತಾಯಿಸಿದರು.

ಒಕ್ಕೂಟದ ಅಧ್ಯಕ್ಷ ವಿಜಯ್‌ಕುಮಾರ್ ಟಿ.ಸಿ, ‘ಸಹಕಾರ ಸಚಿವ ಕೆ.ಎಂ. ರಾಜಣ್ಣ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗುವುದು. ನೋಂದಾಯಿತ ಚಿಟ್ ಫಂಡ್ ಸಂಸ್ಥೆಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸುವಂತೆ ಕೋರಲಾಗುವುದು’ ಎಂದು ಹೇಳಿದರು.

ರಾಜ್ಯದ ಎಲ್ಲ ಜಿಲ್ಲೆಗಳ ಚಿಟ್ ಫಂಡ್ ಸಂಸ್ಥೆಗಳ ಪ್ರತಿನಿಧಿಗಳು, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ಹೊರ ರಾಜ್ಯಗಳ ಒಕ್ಕೂಟದ ಪದಾಧಿಕಾರಿಗಳು ಉತ್ಸವದಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.