ಬೆಂಗಳೂರು: ರಾಜ್ಯದಲ್ಲಿ ಪದವಿ ಪೂರ್ವ ಕಾಲೇಜುಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಗೌರವ ಸಂಭಾವನೆಯನ್ನು ₹ 3,000 ಹೆಚ್ಚಳ ಮಾಡಲಾಗಿದೆ ಎಂದುಪ್ರಾರ್ಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಟ್ವೀಟ್ ಮಾಡಿದ್ದಾರೆ.

ಸರ್ಕಾರಿ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವ ಸಂಭಾವನೆಯನ್ನು ಪರಿಷ್ಕರಣೆ ಮಾಡಲಾಗಿದ್ದು, ₹9,000 ದಿಂದ ₹12,000 ಕ್ಕೆ ಹೆಚ್ಚಳ ಮಾಡಲಾಗಿದೆ ಸರ್ಕಾರ ಆದೇಶ ಹೊರಡಿಸಿದೆ. ಪ್ರಸಕ್ತ ಸಾಲಿನಲ್ಲಿ ಉಪನ್ಯಾಸಕರ ಕೊರತೆ ನೀಗಿಸಲು 3,708 ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದುಬಿ.ಸಿ ನಾಗೇಶ್ ಟ್ವೀಟ್ ಮಾಡಿದ್ದಾರೆ.

ತಿಂಗಳಿಗೆ ₹ 15 ಸಾವಿರದಿಂದ ₹ 20 ಸಾವಿರ ಗೌರವ ವೇತನ ನೀಡಬೇಕೆಂದು ಅತಿಥಿ ಉಪನ್ಯಾಸಕರು ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದರು. ಆದರೆ ಸರ್ಕಾರ ₹ 12,000 ಗೌರವಧನ ನಿಗಧಿಪಡಿಸಿ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ 1,250ಕ್ಕೂ ಹೆಚ್ಚು ಪದವಿ ಪೂರ್ವ ಕಾಲೇಜುಗಳಿದ್ದು, ಸುಮಾರು 3,267 ಅತಿಥಿ ಉಪನ್ಯಾಸಕರು ಕೆಲಸ ಮಾಡುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.