ಬಾಡಿಗೆದಾರರಿಗಿದೆಯೇ ‘ಗೃಹ ಜ್ಯೋತಿ’?
ಬಾಡಿಗೆ ಮನೆಯಲ್ಲಿ ವಾಸಿಸುವವರಿಗೂ ಗೃಹ ಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪೂರೈಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಇಂಧನ ಸಚಿವ ಕೆ.ಜೆ. ಜಾರ್ಜ್ ಭರವಸೆ ನೀಡಿದ್ದರು. ಆದರೆ, ಮಾರ್ಗಸೂಚಿಯಲ್ಲಿ ಈ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಒಬ್ಬ ವ್ಯಕ್ತಿಯ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಗೃಹ ಬಳಕೆಯ ವಿದ್ಯುತ್ ಸಂಪರ್ಕಗಳಿದ್ದರೆ (ಆರ್.ಆರ್ ಸಂಖ್ಯೆ) ಒಂದು ಸಂಪರ್ಕಕ್ಕೆ ಮಾತ್ರ ಗೃಹ ಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಸೌಲಭ್ಯ ದೊರಕಲಿದೆ ಎಂದು ಮಾರ್ಗಸೂಚಿ ಹೇಳಿದೆ. ಬಾಡಿಗೆ ಮನೆಯಲ್ಲಿ ವಾಸಿಸುವವರಿಗೆ ಯೋಜನೆಯಡಿ ಅನುಕೂಲ ಕಲ್ಪಿಸುವ ಕುರಿತು ಯಾವುದೇ ಉಲ್ಲೇಖವಿಲ್ಲ. ಬಾಡಿಗೆ ಮನೆಗಳಲ್ಲಿ ವಾಸಿಸುವ ಕುಟುಂಬಗಳ ಯಜಮಾನನ ಆಧಾರ್ ಹಾಗೂ ಬಾಡಿಗೆ ಕರಾರು ಪ್ರತಿಯ ಸಹಿತ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಪಡೆದು ಬಾಡಿಗೆದಾರ ಕುಟುಂಬಗಳಿಗೆ ಗೃಹ ಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪೂರೈಸುವ ಪ್ರಸ್ತಾವವನ್ನು ಇಂಧನ ಇಲಾಖೆ ಸಿದ್ಧಪಡಿಸಿತ್ತು.