ರಾಮನಗರ: ಪೊಲೀಸರ ಕೈಗೆ ಸಿಗದೇ ತಲೆ ಮರೆಸಿಕೊಂಡಿರುವ ನಿತ್ಯಾನಂದ ಸ್ವಾಮೀಜಿಯನ್ನು ಹುಡುಕಿ ಗುಜರಾತ್ ಪೊಲೀಸರು ಬಿಡದಿಯ ಧ್ಯಾನಪೀಠ ಆಶ್ರಮದಲ್ಲಿ ಶೋಧ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಗುಜರಾತ್ ಹೈಕೋರ್ಟ್ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಕೆ ಹಿನ್ನೆಲೆಯಲ್ಲಿ ನಿತ್ಯಾನಂದ ವಿರುದ್ಧ ಸರ್ಚ್ ವಾರಂಟ್ ಹೊರಡಿಸಿದ್ದು ಅದರೊಂದಿಗೆ ಪೊಲೀಸರು ಶುಕ್ರವಾರ ಆಶ್ರಮ ಪ್ರವೇಶಿಸಿದರು. ಅಲ್ಲಿನ ಸಿಬ್ಬಂದಿಯಿಂದ ಮಾಹಿತಿ ಪಡೆದರು.

ಶನಿವಾರವೂ ಆಶ್ರಮದಲ್ಲಿ ಹುಡುಕಾಟ ನಡೆಸಿದರು. ಆದರೆ ಎಲ್ಲಿಯೂ ನಿತ್ಯಾನಂದನ ಸುಳಿವು ಪತ್ತೆ ಆಗಲಿಲ್ಲ. ನಿತ್ಯಾನಂದನನ್ನು ಹುಡುಕಿ ರಾಜ್ಯ ಸಿಐಡಿ ಪೊಲೀಸರು ಕಳೆದ ವಾರ ಆಶ್ರಮಕ್ಕೆ ಭೇಟಿ ನೀಡಿದ್ದರು ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.