ಉಪ ಚುನಾವಣೆಯಲ್ಲಿ ಸೋತ ಹತಾಶೆಯಿಂದ ಸ್ಥಿಮಿತ ಕಳೆದುಕೊಂಡ ಕುಮಾರಸ್ವಾಮಿ ಮಂಗಳೂರು ಗಲಭೆ ವಿಡಿಯೊ ಬಿಡುಗಡೆ ಮಾಡಿದ್ದಾರೆ ಎಂದು ಡಿಸಿಎಂ ಲಕ್ಮಣ ಸವದಿ ಆರೋಪಿಸಿದ್ದಾರೆ. ಸರಿ... ಹಾಗಾದರೆ ಸವದಿ ಅದ್ಯಾವ ಸ್ಥಿಮಿತ ಕಳೆದುಕೊಂಡು ಸದನದಲ್ಲಿ ನೀಲಿ ಚಿತ್ರ ನೋಡಿದರು? ಈ ಬಾರಿ ಅವರು ಯಾವ ಚುನಾವಣೆ ಗೆದ್ದಿದ್ದಾರೆ? ಸ್ಥಿಮಿತ ಉಳಿದಿದೆಯೇ? 3/12
ಗಲಭೆಯ ಸಿಡಿ ಬಿಡುಗಡೆ ಮಾಡಿದ್ದಕ್ಕೆ ಸದಾನಂದಗೌಡ ವ್ಯಂಗ್ಯವಾಡಿದ್ದಾರೆ.ಸಿಡಿ ಹಲವರಿಗೆ ರಾಜಕೀಯ ಅಸ್ತಿತ್ವದ ಸ್ವತ್ತು ಎಂದಿದ್ದಾರೆ.ಬಿಜೆಪಿಯಲ್ಲಿ ಸದ್ದು ಮಾಡಿದ ಸಿಡಿಗಳ ಸಂಖ್ಯೆ ಒಂದೆರಡೇ? ಎಲ್ಲ ಸಿಡಿಗಳು ಬಯಲಾದರೆ ಬಿಜೆಪಿಗರು ಬೆತ್ತಲಾಗುತ್ತಾರಷ್ಟೇ. ಸಿಡಿಗಳು ಬಿಜೆಪಿಯ ಸ್ವತ್ತು. ಸಿಡಿ ಬಗ್ಗೆ ಮಾತಾಡುವಾಗ ಸದಾನಂದಗೌಡ ಎಚ್ಚರವಾಗಿರಲಿ. 6/12
ಮಂಗಳೂರು ಶಾಂತಿಯಿಂದಿದೆ, ಮರಳಿ ಗಲಭೆ ಎಬ್ಬಿಸಿ ಅಲ್ಲಿ ಅಸ್ತಿತ್ವವೇ ಇಲ್ಲದ ತಮ್ಮ ಪಕ್ಷಕ್ಕೆ ನೆಲೆ ಕಲ್ಪಿಸಲು ಕುಮಾರಸ್ವಾಮಿ ಪ್ರಯತ್ನಿಸುತ್ತಿದ್ದಾರೆ ಎಂದು ಸೋದರಿ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮಂಗಳೂರಿನ ಭಿನ್ನ ಧ್ವನಿಗಳ ಕೊರಳು ಬಿಗಿ ಹಿಡಿದು, ಉಸಿರುಗಟ್ಟಿಸಿ, ಸದ್ದು ಬಾರದಂತೆ ಮಾಡಿರುವುದು ನಿಮ್ಮ ಪ್ರಕಾರ 'ಶಾಂತಿ'ಯೇ? 7/12
ಮಂಗಳೂರಿನಲ್ಲಿ ನಾನು ರಾಜಕಾರಣ ಮಾಡಬಾರದು ಎನ್ನುತ್ತಾರೆ ಸೋದರಿ ಶೋಭಾ. ಆದರೆ, ರಾಜಕೀಯ ಪಕ್ಷವೊಂದರ ಶಾಸಕಾಂಗ ಪಕ್ಷದ ನಾಯಕನಾದ ನಾನು ಮಂಗಳೂರಲ್ಲಿ ಏಕೆ ರಾಜಕಾರಣ ಮಾಡಬಾರದು? ಹಾಗೇನಾದರೂ ನನಗೆ ನಿರ್ಬಂಧವಿದೆಯೇ? ಮಂಗಳೂರಲ್ಲಿ ನಾನೂ ರಾಜಕಾರಣ ಮಾಡುತ್ತೇನೆ. ಆದರೆ ಬಿಜೆಪಿಯಂತಲ್ಲ. ಸಾತ್ವಿಕವಾಗಿ. 12/12