ಬೆಂಗಳೂರು: ‘ಹಿಂದಿ ರಾಷ್ಟ್ರ ಭಾಷೆಯಲ್ಲ‘ ಎಂಬ ಕನ್ನಡ ಚಿತ್ರನಟ ಸುದೀಪ್ ಹೇಳಿಕೆಯನ್ನು ಬೆಂಬಲಿಸಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ’ಶ್ರೇಷ್ಠತೆಯ ವ್ಯಸನ ಭಾರತವನ್ನು ಒಡೆಯುತ್ತಿದೆ’ ಎಂದು ಹಿಂದಿ ಚಿತ್ರನಟ ಅಜಯ್ ದೇವಗನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾಷೆಗೆ ಸಂಬಂಧಿಸಿದಂತೆ ಸುದೀಪ್ ಮತ್ತು ಅಜಯ್ ದೇವಗನ್ ನಡುವೆ ಟ್ವಿಟರ್‌ನಲ್ಲಿ ಬುಧವಾರ ನಡೆದ ವಾಗ್ವಾದದ ಕುರಿತು ಸರಣಿ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಅವರು, ‘ಸುದೀಪ್ ಹಿಂದಿ ರಾಷ್ಟ್ರಭಾಷೆಯಲ್ಲ ಎಂದು ಹೇಳಿರುವುದು ಸರಿ ಇದೆ. ಅವರ ಮಾತಿನಲ್ಲಿ ತಪ್ಪು ಹುಡುಕುವಂಥದ್ದು ಏನೂ ಇಲ್ಲ. ನಟ ಅಜಯ್ ದೇವಗನ್ ಅತಿರೇಕದಿಂದ ಪ್ರತಿಕ್ರಿಯಿಸಿ ಅಧಿಕರಸಂಗತನ ಮೆರೆದಿದ್ದಾರೆ’ ಎಂದು ಹೇಳಿದ್ದಾರೆ.

ದೇಶದ ಭಾಷೆಗಳಲ್ಲಿ ಹಿಂದಿಯೂ ಒಂದಷ್ಟೇ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಮರಾಠಿಯಂತೆ ಅದೂ ಒಂದು ಭಾಷೆ ಮಾತ್ರ. ಭಾರತ ಬಹು ಭಾಷೆಗಳ ತೋಟ. ಬಹು ಧರ್ಮ, ಬಹು ಭಾಷೆ, ಬಹು ಸಂಸ್ಕೃತಿಗಳ ಬೀಡು. ಇದನ್ನು ಕದಡುವ ಪ್ರಯತ್ನ ಬೇಡ. ಹೆಚ್ಚು ಜನ ಮಾತನಾಡುತ್ತಾರೆ ಎಂದ ಮಾತ್ರಕ್ಕೆ ಹಿಂದಿ ಎಲ್ಲರ ಭಾಷೆಯಲ್ಲ ಎಂದಿದ್ದಾರೆ.

ಮೊದಲಿನಿಂದಲೂ ಕೇಂದ್ರದಲ್ಲಿ ಆಡಳಿತ ನಡೆಸಿದ ‘ಹಿಂದಿ ರಾಜಕೀಯ ಪಕ್ಷಗಳು’ ಪ್ರಾದೇಶಿಕ ಭಾಷೆಗಳನ್ನು ಹೊಸಕಿ ಹಾಕುವ ದುಷ್ಟ ಪ್ರಯತ್ನ ಮಾಡುತ್ತಿವೆ. ಕಾಂಗ್ರೆಸ್ ಆರಂಭ ಮಾಡಿದ ಅನ್ಯಭಾಷೆಗಳನ್ನು ಹತ್ತಿಕ್ಕುವ ಕೃತ್ಯಗಳನ್ನು ಈಗ ಬಿಜೆಪಿ ಅತಿಯಾಗಿ ಮುಂದುವರಿಸುತ್ತಿದೆ. ಒಂದೇ ಪಕ್ಷ, ಒಂದೇ ತೆರಿಗೆ, ಒಂದೇ ಭಾಷೆ, ಒಂದೇ ಸರಕಾರ ಎನ್ನುವ ಸರ್ವಾಧಿಕಾರಿ ಮನಃಸ್ಥಿತಿಯ ಬಿಜೆಪಿ ಮತ್ತು ಅದರ ಹಿಂದಿ ರಾಷ್ಟ್ರೀಯವಾದದ ಮುಖವಾಣಿಯ ರೀತಿಯಲ್ಲಿ ದೇವಗನ್ ಬಡಬಡಿಸಿದ್ದಾರೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ದೇವಗನ್ ಅರ್ಥ ಮಾಡಿಕೊಳ್ಳಬೇಕು. ಕನ್ನಡ ಚಿತ್ರರಂಗ ಇವತ್ತು ಹಿಂದಿ ಚಿತ್ರರಂಗವನ್ನು ಮೀರಿ ಬೆಳೆಯುತ್ತಿದೆ. ಕನ್ನಡಿಗರು ಕೂಡ ಪ್ರೋತ್ಸಾಹಿಸಿದ ಪರಿಣಾಮ ಹಿಂದಿ ಚಿತ್ರರಂಗ ಬೆಳೆದಿದೆ. ಶ್ರೇಷ್ಠತೆಯ ವ್ಯಸನ ಭಾರತವನ್ನು ಒಡೆಯುತ್ತಿದೆ. ಬಿಜೆಪಿ ಬಿತ್ತಿದ ಈ ರೋಗ, ಅಂಟು ಜಾಢ್ಯದಂತೆ ಹರಡುತ್ತಾ ದೇಶವನ್ನು ಛಿದ್ರಗೊಳಿಸುವಂತಿದೆ. ಭಾರತದ ಏಕತೆಗೆ ಇದು ಅಪಾಯಕಾರಿ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.