ನವದೆಹಲಿ: ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿರುವ ನಟಿ ಸುಮಲತಾ ವಿರುದ್ಧ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಹರಿಹಾಯ್ದರು.

ಇಲ್ಲಿನ ಕರ್ನಾಟಕ ಭವನದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಗಂಡ ಸತ್ತು ಒಂದೆರಡು ತಿಂಗಳಾಗಿಲ್ಲ. ಸುಮಲತಾ ಅವರಿಗೆ ರಾಜಕೀಯ ಯಾಕೆ ಬೇಕಿತ್ತು’ ಎಂದು ಅವರು ಪ್ರಶ್ನಿಸಿದರು.

‘ಅಂಬರೀಷ್ ಅವರು ತೀರಿಕೊಂಡಾಗ ಮನೆಯವರೇ ತೀರಿಕೊಂಡಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕಂಬನಿ ಮಿಡಿದಿದ್ದರು. ಆದರೆ, ಚುನಾವಣೆ ಸ್ಪರ್ಧೆ ಬಗ್ಗೆ ಸುಮಲತಾ ಅವರು ಸವಾಲು ಹಾಕುವುದರೊಂದಿಗೆ ಜೆಡಿಎಸ್ ಅನ್ನು ಕೆಣಕಿದ್ದಾರೆ’ ಎಂದು ದೂರಿದರು.

ಅವರ ಸವಾಲನ್ನು ಸ್ವೀಕರಿಸುವುದು ನಮಗೂ ಅನಿವಾರ್ಯ ಆಗಿದೆ ಎಂದ ರೇವಣ್ಣ, ಮೊದಲು ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ಆಲೋಚನೆ ಇರಲಿಲ್ಲ. ಕೃತಜ್ಞತೆ ಇರದ ಸುಮಲತಾ ಅವರ ಸವಾಲನ್ನು ಸ್ವೀಕರಿಸಿ ಸ್ಪರ್ಧೆಯ ವಿಚಾರ ಮಾಡಿದ್ದೇವೆ ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.