ಬೆಂಗಳೂರು: ಕೋವಿಡ್ ಕಾರಣದಿಂದ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಹಜ್ ಯಾತ್ರೆ ಪ್ರಕ್ರಿಯೆಗೆ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ನಗರದ ಹಜ್ ಭವನದಲ್ಲಿ ಬುಧವಾರ ಚಾಲನೆ ನೀಡಿದರು.

‘ವಿಶ್ವದಾದ್ಯಂತ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಜೊತೆಗೆ, ಲಸಿಕೆ ಕಾರ್ಯ ಚುರುಕುಗೊಂಡಿದೆ. ಹೀಗಾಗಿ, ಈ ಬಾರಿ ಹಜ್ ಯಾತ್ರೆಗೆ ಅವಕಾಶ ಕಲ್ಪಿಸಲಾಗಿದೆ’ ಎಂದರು.

‘ಯಾತ್ರೆಗೆ ಇದೇ 1ರಿಂದಲೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಕಾರ್ಯ ಆರಂಭವಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿರುವ ಸುಲಭವಾಗಿ ಅರ್ಜಿ ಸಲ್ಲಿಸಬಹುದು. ಮುಂದಿನ ಜ. 31ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ. ಮುಂದಿನ ಜುಲೈ ತಿಂಗಳಲ್ಲಿ ಮುಖ್ಯಮಂತ್ರಿ ಸಮ್ಮುಖದಲ್ಲಿ ಲಾಟರಿ ನಡೆಸಿ, ಯಾತ್ರಿಕರನ್ನು ಆಯ್ಕೆ ಮಾಡಿ ಯಾತ್ರೆ ಆಯೋಜಿಸಲಾಗುವುದು’ ಎಂದು ಜೊಲ್ಲೆ ತಿಳಿಸಿದರು.

‘ಯಾತ್ರೆ ಸಂದರ್ಭದಲ್ಲಿ ಯಾವುದೇ ತೊಂದರೆ ಆಗದಂತೆ ಸೌಲಭ್ಯಗಳನ್ನು ಕಲ್ಪಿಸಬೇಕು. ವಿಮಾನ, ವಾಸ್ತವ್ಯ ಮತ್ತು ಇತರ ವ್ಯವಸ್ಥೆಗಳಲ್ಲಿ ಲೋಪ ಆಗದಂತೆ ಕ್ರಮ ಕೈಕೊಳ್ಳಬೇಕು’ ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯದ ವಿವಿಧ ಭಾಗಗಳಲ್ಲಿ ಹಜ್ ಭವನ ನಿರ್ಮಾಣ, ಬೆಂಗಳೂರು ಹಜ್ ಭವನದ ದುರಸ್ತಿ, ಹೆಚ್ಚಿನ ಅನುದಾನ ದೊರಕಿಸಿಕೊಡಲು ಮುಖ್ಯಮಂತ್ರಿ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಸಭೆ: ಯಾತ್ರೆಗೆ ಸಂಬಂಧಿಸಿದಂತೆ ರಾಜ್ಯ ಹಜ್ ಸಮಿತಿಯ ಜೊತೆ ಹಜ್ ಭವನದಲ್ಲಿ ಸಚಿವರು ಸಭೆ ನಡೆಸಿದರು. ಸಭೆಯಲ್ಲಿ ಸಮಿತಿಯ ನೂತನ ಅಧ್ಯಕ್ಷ ರವೂಫುದ್ದೀನ್ ಕಚೇರಿವಾಲೆ, ಸಮಿತಿಯ ಸದಸ್ಯರೂ ಆಗಿರುವ ರಾಜ್ಯಸಭಾ ಸದಸ್ಯ ಸೈಯದ್ ನಾಸಿರ್ ಹುಸೇನ್, ಶಾಸಕಿ ಹಾಗೂ ಸಮಿತಿ ಸದಸ್ಯೆ ಖಾನಿಜ್ ಫಾತಿಮಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.