ಹಾವೇರಿ: ಹಾನಗಲ್ ತಾಲ್ಲೂಕಿನ ನಾಲ್ಕರ್ ಕ್ರಾಸ್ ಸಮೀಪ ಜ.8ರಂದು ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಈವರೆಗೆ ಒಟ್ಟು 10 ಆರೋಪಿಗಳನ್ನು ಬಂಧಿಸಿದಂತಾಗಿದೆ.

ಅಕ್ಕಿಆಲೂರಿನ ಮೀನು ವ್ಯಾಪಾರಿ ಇಬ್ರಾಹಿಂ ಖಾದರ್ ಗೌಸ್ (27) ಮತ್ತು ಕಾರು ಚಾಲಕ ತೌಸಿಫ್ ಅಹಮದ್ ಚೌಟಿ ಅಲಿಯಾಸ್ ಕಾಟ್ಲ (25) ಈ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ದಿನದಿಂದ ದಿನಕ್ಕೆ ಆರೋಪಿಗಳ ಸಂಖ್ಯೆ ಏರಿಕೆಯಾಗುತ್ತಿರುವುದು ಪ್ರಕರಣದ ಗಂಭೀರತೆಯನ್ನು ಹೆಚ್ಚಿಸಿದ್ದು, ಜಿಲ್ಲೆಯಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

ಘಟನೆ ನಂತರ ತಲೆಮರೆಸಿಕೊಂಡಿದ್ದ ಇಬ್ರಾಹಿಂ, ಅಕ್ಕಿಆಲೂರಿನಲ್ಲೇ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ. ಪೊಲೀಸರಿಗೆ ಯಾವ ಸುಳಿವೂ ಬಿಟ್ಟುಕೊಡದೆ ತಲೆಮರೆಸಿಕೊಂಡಿದ್ದ ತೌಸಿಫ್‌ನನ್ನು ಪೊಲೀಸ್ ವಿಶೇಷ ತನಿಖಾ ತಂಡ ಹೈದರಾಬಾದ್‌ನಲ್ಲಿ ಬಲೆಗೆ ಬೀಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜತೆಗೆ ಕೃತ್ಯಕ್ಕೆ ಬಳಸಿದ್ದ ಕಾರು ಮತ್ತು ಬೈಕ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
.ಸಾಮೂಹಿಕ ಅತ್ಯಾಚಾರ: ಎಸ್ಐಟಿ ತನಿಖೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಜ. 20ರಂದು.ಹಾನಗಲ್ ಸಾಮೂಹಿಕ ಅತ್ಯಾಚಾರ: ಬಂಧಿತರ ಸಂಖ್ಯೆ 8ಕ್ಕೆ ಏರಿಕೆ.
ಬಂಧಿತ ಇತರ ಆರೋಪಿಗಳು:

ಅಕ್ಕಿಆಲೂರಿನ ಗ್ಯಾರೇಜ್ ಕಾರ್ಮಿಕ ಅಫ್ತಾಬ್ ಚಂದನಕಟ್ಟಿ (24), ವ್ಯಾಪಾರಿ ಮಾದರಸಾಬ್ ಮಂಡಕ್ಕಿ (23), ಆಟೊ ಚಾಲಕ ಅಬ್ದುಲ್ ಖಾದರ್ ಜಾಫರಸಾಬ್ ಹಂಚಿನಮನಿ (28), ಹಾಲಿನ ವ್ಯಾಪಾರಿ ಇಮ್ರಾನ್ ಬಶೀರ್ ಅಹಮದ್ ಜೇಕಿನಕಟ್ಟಿ (23), ಗ್ಯಾರೇಜ್ ಕಾರ್ಮಿಕ ರೇಹಾನ್ ಮಹಮ್ಮದ್ ಹುಸೇನ್ ವಾಲೀಕಾರ (19), ಸಂತೆ ವ್ಯಾಪಾರಿ ಸಾದಿಕ್ ಬಾಬುಸಾಬ್ ಅಗಸಿಮನಿ (29), ಹೋಟೆಲ್ ಕಾರ್ಮಿಕ ಶೋಯೆಬ್ ನಿಯಾಜ್ ಅಹ್ಮದ್ ಮುಲ್ಲಾ (19), ಮಫೀದ್ ಓಣಿಕೇರಿ (23).

ಆರೋಪಿಗೆ ಕಿಮ್ಸ್‌ನಲ್ಲಿ ಚಿಕಿತ್ಸೆ:

ಪ್ರಕರಣಕ್ಕೆ ಸಂಬಂಧಿಸಿದ ಇನ್ನೊಬ್ಬ ಆರೋಪಿ ಮಹಮ್ಮದ್ ಸೈಫ್ ಸಾವಿಕೇರಿ ಎಂಬಾತ ಅಪಘಾತದಲ್ಲಿ ಕಾಲಿನ ಮೂಳೆ ಮುರಿದುಕೊಂಡು, ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಒಂದು ವಾರ ಚಿಕಿತ್ಸೆ ಪಡೆದಿದ್ದ. ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾನೆ. ಚಿಕಿತ್ಸೆ ಪೂರ್ಣಗೊಂಡ ಬಳಿಕ ಬಂಧಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ್ ತಿಳಿಸಿದ್ದಾರೆ.
.ಸಾಮೂಹಿಕ ಅತ್ಯಾಚಾರ ಪ್ರಕರಣ: ಮುಜುಗರ ತಪ್ಪಿಸಲು ಸಂತ್ರಸ್ತೆ ದಿಢೀರ್ ಸ್ಥಳಾಂತರ!.ಹಾನಗಲ್ ಅತ್ಯಾಚಾರ ಪ್ರಕರಣ ಮುಚ್ಚಿ ಹಾಕುವುದು ಗ್ಯಾರಂಟಿ: ಬಸವರಾಜ ಬೊಮ್ಮಾಯಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.