ಬೆಂಗಳೂರು: ಶಾಸಕ ಮುನಿರತ್ನ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ವೈಯಾಲಿಕಾವಲ್ ಠಾಣೆ ಪೊಲೀಸರು ಭದ್ರತೆ ನಡುವೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಮಂಗಳವಾರ ಸಂಜೆ ಬಿಟ್ಟು ಬಂದರು.

ಅದಕ್ಕೂ ಮೊದಲು ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದರಿಂದ ಕಾರಾಗೃಹಕ್ಕೆ ಕಳುಹಿಸಲಾಯಿತು ಎಂದು ಪೊಲೀಸರು ಹೇಳಿದರು.

‘ಎರಡು ದಿನಗಳ ಕಾಲ ಆರೋಪಿಯನ್ನು ತೀವ್ರ ವಿಚಾರಣೆ ಒಳಪಡಿಸಲಾಯಿತು. ಜಾತಿ ನಿಂದನೆ ಹಾಗೂ ಕೊಲೆ ಬೆದರಿಕೆ ಹಾಕಿದ್ದ ಸಂಬಂಧ ಆರೋಪಿಯಿಂದ ಮಾಹಿತಿ ಕಲೆ ಹಾಕಲಾಗಿದೆ. ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜು ಮೊದಲು ಹೇಗೆ ಪರಿಚಯ ಆಗಿದ್ದರು? ತಮ್ಮ ಮಧ್ಯೆ ಸಂಬಂಧ ಹೇಗಿತ್ತು? ಆಡಿಯೊದಲ್ಲಿ ಇರುವುದು ತಮ್ಮದೇ ಧ್ವನಿಯೇ ಎಂಬ ಪ್ರಶ್ನೆ ಕೇಳಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ ಆಡಿಯೊ ತುಣುಕು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ(ಎಫ್‌ಎಸ್‌ಎಲ್) ಕಳುಹಿಸಲಾಗಿದೆ. ಅದರ ವರದಿ ಬಂದ ನಂತರ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
.ಧ್ವನಿ ಮಾದರಿ ಸಂಗ್ರಹ: ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ಎಂದ ಶಾಸಕ ಮುನಿರತ್ನ.ಮುನಿರತ್ನ ಆಡಿಯೊ; ಕಾಂಗ್ರೆಸ್ ಟೂಲ್ಕಿಟ್ ಕೆಲಸ: ಸಿ.ಟಿ.ರವಿ ಆರೋಪ.ಶಾಸಕ ಮುನಿರತ್ನ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ: CM ಭೇಟಿಯಾದ ಒಕ್ಕಲಿಗ ಸಚಿವರು.ಮುನಿರತ್ನ ಪ್ರಕರಣದ ಹಿಂದೆ ಡಿ.ಕೆ ಶಿವಕುಮಾರ್: ಶಾಸಕ ರಮೇಶ ಜಾರಕಿಹೊಳಿ .ಜಾತಿ ನಿಂದನೆ, ಲಂಚಕ್ಕೆ ಬೇಡಿಕೆ ಇಟ್ಟ ಆರೋಪ: ಬಿಜೆಪಿ ಶಾಸಕ ಮುನಿರತ್ನ ಬಂಧನ.ಮುನಿರತ್ನ ಬಂಧನ | ದ್ವೇಷದ ರಾಜಕಾರಣ ಮಾಡಿಲ್ಲ: ಸಚಿವೆ ಲಕ್ಷ್ಮಿ ಹೆಬ್ಬಾಳಕರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.