ಬೆಂಗಳೂರು: ಚಿನ್ನ, ಬೆಳ್ಳಿ ವರ್ತಕರು ಹಾಗೂ ಗಿರವಿ ಅಂಗಡಿಗಳ ಮಾಲೀಕರಿಗೆ ಪೊಲೀಸರು ನೀಡುತ್ತಿರುವ ಕಿರುಕುಳ ತಡೆಯಬೇಕು ಎಂದು ಜೆಡಿಎಸ್‌ನ ಟಿ.ಎ. ಶರವಣ ಒತ್ತಾಯಿಸಿದರು.

ವಿಧಾನ ಪರಿಷತ್‌ನಲ್ಲಿ ಶುಕ್ರವಾರ ಮಾತನಾಡಿದ ಅವರು, ಪೊಲೀಸ್ ಅಧಿಕಾರಿಗಳು ಸೂಕ್ತ ತನಿಖೆ ಮಾಡುವ ಮೊದಲೇ, ಅಂಗಡಿ ಮಾಲೀಕರನ್ನು ಅಮಾನವೀಯವಾಗಿ ನಡೆಸಿಕೊಳ್ಳುತ್ತಿದ್ದಾರೆ. ಅವರಿಗೂ ಸ್ವಾಭಿಮಾನವಿದೆ, ಬದುಕುವ ಹಕ್ಕಿದೆ. ಅದಕ್ಕೆ ಭಂಗ ಮಾಡಬಾರದು ಎಂದರು.

ಕಿರುಕುಳ ನೀಡುತ್ತಿರುವ ಪೊಲೀಸ್ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು. ನೆಮ್ಮದಿಯಾಗಿ ಕೆಲಸ ಮಾಡಲು ಅವರಿಗೆ ಅವಕಾಶ ಮಾಡಿಕೊಡಬೇಕು ಎಂದು ಕೋರಿದರು.

ಚಿನ್ನ, ಬೆಳ್ಳಿ ಆಭರಣ ಹಾಗೂ ಗಿರವಿ ಅಂಗಡಿಗಳ ಮಾಲೀಕರ ಸಂಘಟನೆಗಳು ಹಾಗೂ ಪೊಲೀಸ್ ಅಧಿಕಾರಿಗಳ ಪ್ರತ್ಯೇಕ ಸಭೆ ಕರೆದು ಸಮಸ್ಯೆಗಳ ಕುರಿತು ಚರ್ಚೆ ನಡೆಸುವುದಾಗಿ ಗೃಹ ಸಚಿವ ಜಿ.ಪರಮೇಶ್ವರ ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.